ಶ್ಲೋಕ – 14
ಅನನ್ಯಚೇತಾಃ ಸತತಂ ಯೋ ಮಾಂ ಸ್ಮರತಿ ನಿತ್ಯಶಃ ।
ತಸ್ಯಾಹಂ ಸುಲಭಃ ಪಾರ್ಥ ನಿತ್ಯಯುಕ್ತಸ್ಯ ಯೋಗಿನಃ ॥೧೪॥
ಉಚ್ಚಾರಣೆ- ಅನನ್ಯ ಚೇತಾಃ ಸತತಮ್ ಯಃ ಮಾಮ್ ಸ್ಮರತಿ ನಿತ್ಯಶಃ ।
ತಸ್ಯ ಅಹಮ್ ಸುಲಭಃ ಪಾರ್ಥ ನಿತ್ಯ ಯುಕ್ತಸ್ಯ ಯೋಗಿನಃ -ಪಾರ್ಥಾ,
ಬೇರೇನನ್ನೂ ನೆನೆಯದೆ ಅನುದಿನವೂ ನಿರಂತರ ನನ್ನನ್ನು ನೆನೆಯುವವನಿಗೆ,
ಅಂಥ ನಿರಂತರ ಸಾಧನೆಯಿಂದ ಸಿದ್ಧಿಪಡೆದವನಿಗೆ ನಾನು ಕೈಸೆರೆ.
“ನಿರಂತರ ನಿತ್ಯ ಭಗವಂತನ ಚಿಂತನೆ ಮಾಡುತ್ತಾ ಬೇರೇನನ್ನೂ ನೆನೆಯದೆ ನನ್ನನ್ನು ಭಜಿಸುವ ಸಾಧಕನಿಗೆ
ನಾನು ಅನಾಯಾಸವಾಗಿ ಸ್ವಾಧೀನನಾಗುತ್ತೇನೆ” ಎನ್ನುತ್ತಾನೆ ಕೃಷ್ಣ.
ಸಾಧನೆಯಲ್ಲಿ ನಿತ್ಯ ತೊಡಗಿ, ಸಾಧನೆಯ ತುದಿ ಮುಟ್ಟಿದವ ಬೇರೆ ಯಾವ ಪ್ರಯತ್ನವೂ ಇಲ್ಲದೆ ಭಗವಂತನನ್ನು ಸೇರುತ್ತಾನೆ.
ಇದನ್ನು ಓದಿ: ಭಗವದ್ಗೀತೆ ಅಧ್ಯಾಯ- 8 , ಶ್ಲೋಕ-13
