ಶ್ಲೋಕ – 19
ಭೂತಗ್ರಾಮಃ ಸ ಏವಾಯಂ ಭೂತ್ವಾಭೂತ್ವಾ ಪ್ರಲೀಯತೇ ।
ರಾತ್ರ್ಯಾಗಮೇSವಶಃ ಪಾರ್ಥ ಪ್ರಭವತ್ಯಹರಾಗಮೇ ॥೧೯॥
ಭೂತ ಗ್ರಾಮಃ ಸಃ ಏವ ಅಯಮ್ ಭೂತ್ವಾಭೂತ್ವಾ ಪ್ರಲೀಯತೇ ।
ರಾತ್ರಿ ಆಗಮೇ ಅವಶಃ ಪಾರ್ಥ ಪ್ರಭವತಿ ಅಹಃ ಆಗಮೇ –
ಪಾರ್ಥ, ಅದೇ ಪಂಚಭೂತಗಳ ಗುಂಪು ಮರಳಿಮರಳಿ ಹುಟ್ಟಿ ಇರುಳಾದಾಗ ಭಗವಂತನ ವಶದಲ್ಲಿ ಲಯಗೊಳ್ಳುತ್ತದೆ; ಹಗಲಾದಾಗ ಹುಟ್ಟುತ್ತದೆ.
ಸೃಷ್ಟಿಯ ಮೂಲದ್ರವ್ಯ ಎಂದೂ ಬದಲಾಗುವುದಿಲ್ಲ. ಅದೇ ಪಂಚಭೂತಗಳು ಮರಳಿಮರಳಿ ಸೃಷ್ಟಿ-ಸಂಹಾರ ಚಕ್ರದಲ್ಲಿ ಸುತ್ತುತ್ತಿರುತ್ತವೆ. ಈ ಚಕ್ರದಲ್ಲಿ ಮೋಕ್ಷ ಯೋಗ್ಯವಲ್ಲದ ಅನಂತ ಜೀವಗಳೂ ಸುತ್ತುತ್ತಿರುತ್ತವೆ. ಆದರೆ ಭಗವಂತನನ್ನು ಸೇರಿದ ಜೀವ ಈ ಚಕ್ರದಿಂದಾಚೆಗಿರುತ್ತದೆ.

[…] ಹಿಂದಿನ ಶ್ಲೋಕ: ಭಗವದ್ಗೀತೆ ಅಧ್ಯಾಯ-8, ಶ್ಲೋಕ -19 […]