ಶ್ಲೋಕ – 23
ಯತ್ರ ಕಾಲೇ ತ್ವನಾವೃತ್ತಿಮಾವೃತ್ತಿಂ ಚೈವ ಯೋಗಿನಃ ।
ಪ್ರಯಾತಾ ಯಾಂತಿ ತಂ ಕಾಲಂ ವಕ್ಷ್ಯಾಮಿ ಭರತರ್ಷಭ ॥೨೩॥
ಉಚ್ಚಾರಣೆ- ಯತ್ರ ಕಾಲೇ ತು ಅನಾವೃತ್ತಿಮ್ ಆವೃತ್ತಿಮ್ ಚ ಏವ ಯೋಗಿನಃ ।
ಪ್ರಯಾತಾಃ ಯಾಂತಿ ತಮ್ ಕಾಲಮ್ ವಕ್ಷ್ಯಾಮಿ ಭರತ ಋಷಭ
ಭರತ ಶ್ರೇಷ್ಠ, ಯಾವ ಕಾಲದೇವತೆಗಳ ದಾರಿಯಲ್ಲಿ ಹೋದ ಸಾಧಕರು ಮರಳುವುದಿಲ್ಲ ಮತ್ತು ಯಾವ ದಾರಿಯಲ್ಲಿ ಮರಳುತ್ತಾರೆ ಅಂಥ ‘ಕಾಲ’ ದೇವತೆಗಳನ್ನು ಹೇಳುತ್ತೇನೆ .
“ಶರೀರವನ್ನು ತ್ಯಾಗ ಮಾಡಿದ(ಕಾಲ ವಶನಾದ) ಜೀವನನ್ನು ಯಾವಯಾವ ದೇವತೆಗಳು ನಿಯಮನ ಮಾಡಿ ಮುಂದೆ ಕರೆದುಕೊಂಡು ಹೋಗುತ್ತಾರೆ;
ಯಾವ ದಾರಿಯಲ್ಲಿ ಹೋದವರು ಮರಳಿ ಭೂಮಿಯಲ್ಲಿ ಹುಟ್ಟುತ್ತಾರೆ ಮತ್ತು ಯಾರು ನೇರವಾಗಿ ಮೋಕ್ಷವನ್ನು ತಲುಪುತ್ತಾರೆ, ಆ ವಿಷಯವನ್ನು ನಿನಗೆ ಹೇಳುತ್ತೇನೆ” ಎನ್ನುತ್ತಾನೆ ಕೃಷ್ಣ.
ಇಲ್ಲಿ ಕೆಲವರು ಕಾಲ ಎನ್ನುವ ಪದವನ್ನೂ ತಪ್ಪಾಗಿ ತಿಳಿದುಕೊಳ್ಳುತ್ತಾರೆ. ಈ ಶ್ಲೋಕದಲ್ಲಿ ಕೃಷ್ಣ ಹೇಳುವ ಕಾಲ ಅಂದರೆ ಸಮಯವಲ್ಲ. ಶರೀರ ತ್ಯಾಗ ಮಾಡಿದ ಜೀವನ ನಿಯಮನ ಮಾಡುವ ದೇವತೆಗಳ ಗಣ ‘ಕಾಲ’.

[…] ಹಿಂದಿನ ಶ್ಲೋಕ – ಭಗವದ್ಗೀತೆ ಅಧ್ಯಾಯ-8, ಶ್ಲೋಕ -23 […]