ಶ್ಲೋಕ – 06
ಯಥಾSSಕಾಶಸ್ಥಿತೋ ನಿತ್ಯಂ ವಾಯುಃ ಸರ್ವತ್ರಗೋ ಮಹಾನ್।
ತಥಾ ಸರ್ವಾಣಿ ಭೂತಾನಿ ಮತ್ ಸ್ಥಾನೀತ್ಯುಪಧಾರಯ ॥೬॥
ಉಚ್ಚಾರಣೆ- ಯಥಾ ಆಕಾಶಸ್ಥಿತಃ ನಿತ್ಯಮ್ ವಾಯುಃ ಸರ್ವತ್ರ ಗಃ ಮಹಾನ್।
ತಥಾ ಸರ್ವಾಣಿ ಭೂತಾನಿ ಮತ್ ಸ್ಥಾನಿ ಇತಿ ಉಪಧಾರಯ –
ಎಲ್ಲೆಡೆ ಹಿಗ್ಗಿ ತುಂಬಿರುವ ಗಾಳಿ ಎಂದೆಂದೂ ಆಗಸದಲ್ಲಿರುವಂತೆ ಜಗದ ಎಲ್ಲ ಇರುವಿಕೆಗಳೂ ನನ್ನಲ್ಲಿವೆ. ಎಂದು ಮನಗಾಣು.
ಗಾಳಿ ಎಲ್ಲಾ ಕಡೆ ಇದೆ. ಅದು ಒಳಗೂ ಇದೆ, ಹೊರಗೂ ಇದೆ. ಗಾಳಿ ನಮಗೆ ಕಾಣುವುದಿಲ್ಲ. ಗಾಳಿ ಈ ಆಕಾಶದಲ್ಲಿ ತುಂಬಿದೆ. ಹೀಗೆ ಭಗವಂತ ನಮ್ಮ ಒಳಗೂ ಹೊರಗೂ ತುಂಬಿ ನಿಂತಿದ್ದಾನೆ. ಆದರೆ ಯಾವುದರ ಲೇಪವೂ ಆತನಿಗಿಲ್ಲ. ಈ ಜಗತ್ತಿನ ಸರ್ವ ಇರುವಿಕೆಯೂ ಭಗವಂತನಲ್ಲಿದೆ.
