Bhagavad Gita
ಶ್ಲೋಕ – 07
ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ ಮಾಮಿಕಾಮ್ ।
ಕಲ್ಪಕ್ಷಯೇ ಪುನಸ್ತಾನಿ ಕಲ್ಪಾದೌ ವಿಸೃಜಾಮ್ಯಹಮ್ ॥೭॥
ಉಚ್ಚಾರಣೆ- ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ ಮಾಮಿಕಾಮ್ ।
ಕಲ್ಪಕ್ಷಯೇ ಪುನಃ ತಾನಿ ಕಲ್ಪ ಆದೌ ವಿಸೃಜಾಮಿ ಅಹಮ್
ಸೃಷ್ಟಿಯ ಕೊನೆಯಲ್ಲಿ ಎಲ್ಲ ವಸ್ತುಗಳೂ ನನ್ನದೇ ಆದ ಮೂಲ ಪ್ರಕೃತಿಯನ್ನು ಸೇರುತ್ತವೆ. ಸೃಷ್ಟಿಯ ಮೊದಲಲ್ಲಿ ಮರಳಿ ಅವನ್ನುನಾನು ನಿರ್ಮಿಸುತ್ತೇನೆ.ಸೃಷ್ಟಿಯಾಗಿ 31,104 ಸಾವಿರ ಕೋಟಿ ವರ್ಷಗಳ ನಂತರ ಮಹಾಪ್ರಳಯ. ಇದು ಚತುರ್ಮುಖ ಬ್ರಹ್ಮನ ನೂರು ವರ್ಷ. ಇದನ್ನು ಕಲ್ಪಕ್ಷಯ ಎನ್ನುತ್ತಾರೆ.
ಈ ಮಹಪ್ರಳಯದಲ್ಲಿ ಸತ್ಯಲೋಕದಿಂದ ಹಿಡಿದು ಪ್ರತಿಯೊಂದೂ ತನ್ನ ಸ್ಥೂಲ ರೂಪವನ್ನು ಕಳೆದುಕೊಂಡು ಸೂಕ್ಷ್ಮ ರೂಪದಲ್ಲಿ ಭಗವಂತನ ಅಧೀನವಾದ ಪ್ರಕೃತಿಯನ್ನು ಸೇರುತ್ತವೆ.
ಎಲ್ಲಾ ಜೀವ ಜಾತಗಳೂ ಕೂಡಾ ತನ್ನ ಸ್ಥೂಲ ರೂಪವನ್ನು ಕಳೆದುಕೊಂಡು ಭಗವಂತನ ಉದರವನ್ನು ಸೇರುತ್ತದೆ. ಮತ್ತೆ 31,104 ಸಾವಿರ ಕೋಟಿ ವರ್ಷ ಪ್ರಳಯಕಾಲ. ನಂತರ ಮರಳಿ ಈ ಸೃಷ್ಟಿ ನಿರ್ಮಾಣವಾಗುತ್ತವೆ. ಅಂದರೆ ಮರಳಿ ಸೂಕ್ಷ್ಮರೂಪದಿಂದ ಸ್ಥೂಲರೂಪವನ್ನು ಪಡೆಯುತ್ತವೆ.
