Bhagavad Gita
ಶ್ಲೋಕ – 20
ತ್ರೈವಿದ್ಯಾ ಮಾಂ ಸೋಮಪಾಃ ಪೂತಪಾಪಾಃ ಯಜ್ಞೈರಿಷ್ಟ್ವಾ ಸ್ವರ್ಗತಿಂ ಪ್ರಾರ್ಥಯಂತೇ ।
ತೇ ಪುಣ್ಯಮಾಸಾದ್ಯ ಸುರೇಂದ್ರ ಲೋಕಮಶ್ನಂತಿ ದಿವ್ಯಾನ್ ದಿವಿ ದೇವಭೋಗಾನ್ ॥೨೦॥
ತ್ರೈ ವಿದ್ಯಾಃ ಮಾಮ್ ಸೋಮಪಾಃ ಪೂತ ಪಾಪಾಃ ಯಜ್ಞೈಃ ಇಷ್ಟ್ವಾ ಸ್ವಃ ಗತಿಮ್ ಪ್ರಾರ್ಥಯಂತೇ ।
ತೇ ಪುಣ್ಯಮ್ ಆಸಾದ್ಯ ಸುರ ಇಂದ್ರ ಲೋಕಮ್ ಅಶ್ನಂತಿ ದಿವ್ಯಾನ್ ದಿವಿ ದೇವ ಭೋಗಾನ್ – ತ್ರೈವಿದ್ಯರು ಮೂರು ವೇದಗಳ ಮೊರೆಹೊಕ್ಕ ಹಂಬಲಿಗರು. ಹೊಮಿಸುತ್ತ ನನ್ನನಾರಾಧಿಸಿ, ಸೋಮರಸ ಕುಡಿದು, ಪಾಪ ತೊಡೆದು, ಸಗ್ಗದ ದಾರಿಯನ್ನು ಬೇಡುತ್ತಾರೆ. ಅವರು ಪುಣ್ಯದ ಫಲವಾಗಿ ದೇವೇಂದ್ರನ ನಾಡು ಸೇರಿ, ಆ ಸಗ್ಗದಲ್ಲಿ ವೆಗ್ಗಳದ ದೇವಭೂಗಗಳನ್ನು ಉಣ್ಣುತ್ತಾರೆ.
ತ್ರೈವಿದ್ಯರು ಎಂದರೆ ತ್ರಿಪಥಗಾಮಿಗಳು! ಇವರು ಭಗವಂತನ ಜೊತೆಗೆ ಅನೇಕವನ್ನು ಹಂಚಿಕೊಂಡವರು. ಇವರು ಸ್ವರ್ಗದ ಬಯಕೆ, ಲೌಕಿಕ ಬಯಕೆಯನ್ನು ಮುಂದಿಟ್ಟು ಭಗವಂತನಲ್ಲಿ ಭಕ್ತಿ ಮಾಡುತ್ತಾರೆ. ಇವರಿಗೆ ವೇದದಲ್ಲಿ ಹೇಳಿದ ಕರ್ಮಖಂಡವೇ ಮುಖ್ಯವಾಗುತ್ತದೆ. ಜ್ಯೋತಿಷ್ಟೋಮಯ ಯಾಗಗದಂತಹ ಯಾಗವನ್ನು ಕೇವಲ ಸ್ವರ್ಗದ ಬಯಕೆಯಿಂದ ಮಾಡಿ, ಭಗವಂತನನ್ನು ಬಯಸದೆ ಸ್ವರ್ಗವನ್ನು ಬಯಸುತ್ತಾರೆ. ಹೀಗೆ ಭಕ್ತಿ ಮಾಡುವುದರ ಫಲವಾಗಿ ಅವರು ಇಂದ್ರನ ನಾಡಾದ ಸ್ವರ್ಗವನ್ನು ಸೇರಿ ಅಲ್ಲಿ ಭೋಗವನ್ನು ಅನುಭವಿಸುತ್ತಾರೆ.
