Bhagavad Gita
ಶ್ಲೋಕ – 29
ಸಮೋSಹಂ ಸರ್ವಭೂತೇಷು ನ ಮೇ ದ್ವೇಷ್ಯೋSಸ್ತಿ ನ ಪ್ರಿಯಃ ।
ಯೇ ಭಜಂತಿ ತು ಮಾಂ ಭಕ್ತ್ಯಾ ಮಯಿ ತೇ ತೇಷು ಚಾಪ್ಯಹಮ್ ॥೨೯॥
ಎಲ್ಲ ಜೀವಿಗಳೂ ನನಗೆ ಒಂದೆ. ನನಗೆ ಹಗೆಯನೂ ಇಲ್ಲ, ಗೆಳೆಯನೂ ಇಲ್ಲ.
ಆದರೆ ಯಾರು ನನ್ನನ್ನು ಭಕ್ತಿಯಿಂದ ಒಲಿಸುತ್ತಾರೆ ಅವರು ನನ್ನ ವಶ; ನಾನು ಅವರ ವಶ.
ಭಗವಂತನಿಗೆ ಯಾರ ಮೇಲೂ ಹಗೆಯಾಗಲೀ ಅಥವಾ ಗೆಳೆತನವಾಗಲೀ ಇಲ್ಲ.
ಆತ ಪ್ರೀತಿಸುವುದು ವ್ಯಕ್ತಿಯನ್ನಲ್ಲ ಬದಲಿಗೆ ವ್ಯಕ್ತಿಯಲ್ಲಿರುವ ಜ್ಞಾನವನ್ನು ಮತ್ತು ಭಕ್ತಿಯನ್ನು.
ಅರ್ಹತೆ ಇದ್ದವರು ಭಗವಂತನನ್ನು ಭಕ್ತಿಯಿಂದ ಒಲಿಸುತ್ತಾರೆ. ನಿಜವಾದ ಭಕ್ತರಿಗೆ ಭಗವಂತ ವಶನಾಗುತ್ತಾನೆ.
