Bhagavad Gita
ಶ್ಲೋಕ – 19
ಇಹೈವ ತೈರ್ಜಿತಃ ಸರ್ಗೋ ಯೇಷಾಂ ಸಾಮ್ಯೇ ಸ್ಥಿತಂ ಮನಃ ।
ನಿರ್ದೋಷಂ ಹಿ ಸಮಂ ಬ್ರಹ್ಮ ತಸ್ಮಾದ್ ಬ್ರಹ್ಮಣಿ ತೇ ಸ್ಥಿತಾಃ ॥೧೯॥
ನಿರ್ದೋಷಂ ಹಿ ಸಮಂ ಬ್ರಹ್ಮ ತಸ್ಮಾದ್ ಬ್ರಹ್ಮಣಿ ತೇ ಸ್ಥಿತಾಃ ॥೧೯॥
ಭಗವಂತನ ಏಕ ರೂಪಾತೆಯಲ್ಲಿ ಬಗೆ ನೆಟ್ಟವರು ಇಲ್ಲಿದ್ದೇ ಈ ಬಾಳನ್ನು ಗೆದ್ದವರು.
ಭಗವಂತ ಎಲ್ಲೆಡೆಯೂ ದೋಷದ ನಂಟಿರದ ಏಕರೂಪಿ. ಆದ್ದರಿಂದ ಹೀಗೆ ತಿಳಿದವರು ಭಗವಂತನಲ್ಲಿ ನೆಲೆಗೊಂಡವರು.
ಭಗವಂತ ಎಲ್ಲೆಡೆಯೂ ದೋಷದ ನಂಟಿರದ ಏಕರೂಪಿ. ಆದ್ದರಿಂದ ಹೀಗೆ ತಿಳಿದವರು ಭಗವಂತನಲ್ಲಿ ನೆಲೆಗೊಂಡವರು.
ಎಲ್ಲ ಕಡೆ ಇರುವ ಸರ್ವಗುಣಪೂರ್ಣ ಭಗವಂತ ಎಲ್ಲ ವಸ್ತುವಿನಲ್ಲಿಯೂ ತುಂಬಿದ್ದಾನೆ ಎನ್ನುವ ಅನುಸಂಧಾನದಲ್ಲಿ ನಮ್ಮ ಮನಸ್ಸು ನೆಟ್ಟಾಗ ಹುಟ್ಟು ಸಾವಿನ ಆಚೆಗಿನ ಮೋಕ್ಷದ ಬಾಗಿಲು ನಮಗೆ ತೆರೆದಂತೆ.
ಭಗವಂತ ಯಾವ ವಸ್ತುವಿನಲ್ಲಿದ್ದರೂ ಅವನಿಗೆ ದೋಷವಿಲ್ಲ, ಆತ ಎಲ್ಲ ಕಡೆ ನಿರ್ದುಷ್ಟನಾಗಿದ್ದಾನೆ. ಯಾವ ಅಧಿಷ್ಠಾನದಲ್ಲಿದ್ದರೂ ಕೂಡಾ ಆತ ನಿರ್ಲಿಪ್ತನಾಗಿ ಅಲ್ಲಿ ತುಂಬಿದ್ದಾನೆ. ಇದನ್ನು ತಿಳಿದವರ ಮನಸ್ಸು ಭಗವಂತನಲ್ಲಿ ನೆಲೆ ನಿಂತಿರುತ್ತದೆ. ಆದ್ದರಿಂದ ಅವರು ಮರಳಿ ಬಂಧನಕ್ಕೊಳಗಾಗದೆ ಶಾಶ್ವತ ಮೊಕ್ಷವನ್ನು ಪಡೆಯುತ್ತಾರೆ.

[…] ಇಂದಿನ ಶ್ಲೋಕ: ಭಗವದ್ಗೀತೆ ಗೀತಾಸಾರ- ಅಧ್ಯಾಯ – 5- ಶ್ಲೋಕ-19 […]
[…] ಭಗವದ್ಗೀತೆ ಗೀತಾಸಾರ- ಅಧ್ಯಾಯ – 5- ಶ್ಲೋಕ-19 […]