ಶ್ಲೋಕ – 23
ಶಕ್ನೋತೀಹೈವ ಯಃ ಸೋಢುಂ ಪ್ರಾಕ್ ಶರೀರವಿಮೋಕ್ಷಣಾತ್ ।
ಕಾಮಕ್ರೋಧೋದ್ಭವಂ ವೇಗಂ ಸ ಯುಕ್ತಃ ಸ ಸುಖೀ ನರಃ ॥೨೩॥
ಕಾಮಕ್ರೋಧೋದ್ಭವಂ ವೇಗಂ ಸ ಯುಕ್ತಃ ಸ ಸುಖೀ ನರಃ ॥೨೩॥
ಒಲುಮೆ-ಸಿಡುಕುಗಳ ಸೆಳೆತವನ್ನು ಇಲ್ಲೇ, ಈ ನರದೇಹ ಕಳಚುವ ಮುನ್ನವೆ ಯಾರು ತಾಳಬಲ್ಲ ಅಂಥ ಮಾನವನೇ ನಿಜವಾದ ಯೋಗಿ; ನಿಜವಾದ ಸುಖಿ. ನಾವು ನಮ್ಮ ಪ್ರಾಪಂಚಿಕ ಸುಖ-ಸ್ಪರ್ಶದ ಮೋಹವನ್ನು ಗೆಲ್ಲಲು ಸಾಧ್ಯವಾಗುವುದು ಈ ದೇಹ ಇರುವಾಗಲೇ.ವಿಷಯಗಳ ಸ್ಪರ್ಶ ಇರುವುದು ದೇಹಕ್ಕೆ ಹಾಗು ವಿಷಯಗಳನ್ನು ಗೆಲ್ಲಲು ಸಾಧ್ಯವಾಗುವುದು ಈ ದೇಹವಿರುವಾಗಲೇ.ಭಗವಂತ ನಮಗೆ ಯಾವುದು ಸರಿ, ಯಾವುದು ತಪ್ಪು ಎನ್ನುವ ವಿಚಾರ ಮಾಡುವ ಬುದ್ಧಿಶಕ್ತಿಯನ್ನು ಕೊಟ್ಟಿದ್ದಾನೆ. ಇಂತಹ ವಿಚಾರ ಶಕ್ತಿಯನ್ನು ಬಳಸಿಕೊಂಡು ಶರೀರ ಬಿದ್ದುಹೋಗುವ ಮೊದಲೇ ಇಂದ್ರಿಯ ನಿಗ್ರಹವನ್ನು ಅಭ್ಯಾಸ ಮಾಡಬೇಕು. ಇದು ಮುಂದಕ್ಕೆ ಹಾಕುವ ಮತ್ತು ಒಂದು ದಿನದಲ್ಲಿ ಸಾಧಿಸುವ ವಿಷಯವಲ್ಲ. ಇದಕ್ಕೆ ನಿರಂತರ ಸಾಧನೆ ಅಗತ್ಯ.
ಈ ದೇಹ ಗಟ್ಟಿಯಾಗಿರುವಾಗಲೇ ಈ ಸಾಧನೆ ಮಾಡಬೇಕು.
ಮನುಷ್ಯನನ್ನು ಕಾಡುವ ಮೂಲಭೂತ ಸಮಸ್ಯೆ ಕಾಮ ಮತ್ತು ಕ್ರೋಧ. ಈ ಕಾಮ ಕ್ರೋಧದ ವೇಗ ನಮ್ಮೆಲ್ಲಾ ವಿವೇಕವನ್ನು ತಳ್ಳಿ ಮುಂದೆ ಬಂದು ನಿಲ್ಲುವಷ್ಟು ಬಲಿಷ್ಠ. ಅದು ಮಳೆಗಾಲದ ಹುಚ್ಚು ಹೊನಲಂತೆ ನಿನ್ನ ವಿಚಾರಧಾರೆಯನ್ನು ಕೊಚ್ಚಿಕೊಂಡು ಹೋಗುವ ಮೊದಲು ಅದನ್ನು ತಡೆ. ಯಾರು ಇದನ್ನು ತಡೆಯಬಲ್ಲರೋ ಅವರು “ಸ ಯುಕ್ತಃ ಸ ಸುಖೀ ನರಃ” ಎನ್ನುತ್ತಾನೆ ಕೃಷ್ಣ.
ಯಾರು ಕಾಮ-ಕ್ರೋಧದ ಬೆನ್ನುಹತ್ತದೆ, ಬಾಹ್ಯ ಸ್ಪರ್ಶವನ್ನು ತಡೆದು ಅಂತರಂಗದ ಅನುಭವಕ್ಕೆ
ತನ್ನನ್ನು ತಾನು ಒಡ್ಡಿಕೊಳ್ಳುತ್ತಾನೆ ಅವನು ನಿಜವಾದ ಸುಖಿ. ನಮ್ಮ ಅಂತರಂಗದ ಅನುಭವ ಎಂಥದ್ದು?
ಒಬ್ಬ ಸಾಧಕ ತನ್ನ ಅಂತರಂಗದಲ್ಲಿ ಕಾಣತಕ್ಕಂತಹ ಆನಂದದ ಅನುಭವವನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸಿದ್ದಾನೆ. ಅರ್ಥ:
ಒಳಗಿನ ಕಾಮ ಮತ್ತು ಕ್ರೋಧದ ವೇಗವನ್ನು ಶರೀರವಿರುವ ಅವಧಿಯಲ್ಲಿ ನಿಯಂತ್ರಿಸಬಲ್ಲ ವ್ಯಕ್ತಿ ನಿಜವಾದ ಯೋಗಿ; ಆತನು ನಿಜವಾದ ಸುಖಿಯನ್ನು ಅನುಭವಿಸುತ್ತಾನೆ.ಭಗವದ್ಗೀತೆ – ಅಧ್ಯಾಯ 5, ಶ್ಲೋಕ 22: ಬಾಹ್ಯ ಸುಖದ ತಾತ್ಕಾಲಿಕ ಸ್ವಭಾವ

[…] ಇದನ್ನು ಓದಿ: ಭಗವದ್ಗೀತೆ – ಅಧ್ಯಾಯ 5, ಶ್ಲೋಕ 23: ಕಾಮ-ಕ್ರೋಧ … […]