Bhagavad Gita
ಶ್ಲೋಕ – 06
ಸಂನ್ಯಾಸಸ್ತು ಮಹಾಬಾಹೋ ದುಃಖಮಾಪ್ತುಮಯೋಗತಃ ।
ಯೋಗಯುಕ್ತೋ ಮುನಿರ್ಬ್ರಹ್ಮನ ಚಿರೇಣಾಧಿಗಚ್ಛತಿ ॥೬॥
ಯೋಗಯುಕ್ತೋ ಮುನಿರ್ಬ್ರಹ್ಮನ ಚಿರೇಣಾಧಿಗಚ್ಛತಿ ॥೬॥
ಓ ಮಹಾವೀರ,ಕರ್ಮಯೋಗವಿರದ ಬರಿಯ ಸಂನ್ಯಾಸ [ದ್ವಂದ್ವ ತ್ಯಾಗ] ಬನ್ನವನ್ನೇ ತಂದೀತು.[ಭಗವಂತನ ಪೂಜೆಯೆಂದು ಕರ್ಮ ಮಾಡುವ ಬದಲು ಕರ್ಮವನ್ನೇ ತೊರೆಯುವುದು ನರಕದ ದಾರಿ]. ಕರ್ಮ ಮಾಡುತ್ತ ದ್ವಂದ್ವವನ್ನು ಗೆದ್ದವನು ಭಗವಂತನನ್ನು ಪಡೆಯಲು ತಡವಾಗದು.
ಕರ್ಮಯೋಗವಿಲ್ಲದ ಬರಿಯ ದ್ವಂದ್ವತ್ಯಾಗ [ಸಂನ್ಯಾಸ] ವ್ಯರ್ಥ.ಶಾಸ್ತ್ರವನ್ನು ಓದಿ ನನಗೆ ಜ್ಞಾನ ಬಂತು, ನಾನು ದ್ವಂದ್ವಾತೀತ, ನನಗೆ ಯಾವ ಕರ್ಮವೂ ಬೇಕಾಗಿಲ್ಲ ಎಂದು ತಿಳಿದು ನಿಷ್ಕ್ರೀಯನಾದರೆ ಅದು ನಮ್ಮನ್ನು ಅದೋಗತಿಗೆ ತಳ್ಳುತ್ತದೆ. ಆದರೆ ದ್ವಂದ್ವಾತೀತನಾಗಿ ಕಾಮಕ್ರೋಧವನ್ನು ಗೆದ್ದು ಜ್ಞಾನಪೂರ್ವಕವಾಗಿ ಕರ್ಮ ಮಾಡಿದರೆ ಅದರಿಂದ ಮೋಕ್ಷ ನಿಶ್ಚಿತ.

[…] ಯೋಗಯುಕ್ತೋ ವಿಶುದ್ಧಾತ್ಮಾ ವಿಜಿತಾತ್ಮಾ ಜಿತೇಂದ್ರಿಯಃ । ಸರ್ವಭೂತಾತ್ಮಭೂತಾತ್ಮಾ ಕುರ್ವನ್ನಪಿ ನ ಲಿಪ್ಯತೇ ॥೭॥ ಕರ್ಮ ಯೋಗದಲ್ಲಿ ತೊಡಗಿದವನು, ತಿಳಿಯಾದ ಬಗೆಯವನು, ಬಗೆಯ ಗೆದ್ದವನು. ಇಂದ್ರಿಯಗಳನ್ನೂ ಗೆದ್ದವನು. ಎಲ್ಲಾ ಜೀವಿಗಳನ್ನು ಪೊರೆವ ಭಗವಂತ ತನ್ನ ದೊರೆಯೆಂದು ತಿಳಿದವನು.[ಭಗವಂತನಲ್ಲೆ ಬಗೆ ನೆಟ್ಟವನು]. ಮಾಡಿದರೂ ಅಂಟಿಸಿಕೊಳ್ಳುವುದಿಲ್ಲ. ಕರ್ಮಯೋಗದಲ್ಲಿ ತೊಡಗಿದವನು ತನ್ನ ಮನೋನಿಗ್ರಹ ಮಾಡಿ ಶುದ್ಧವಾದ ಮನಸ್ಸಿನಿಂದ ಶುದ್ಧ ಕರ್ಮವನ್ನು ಮಾಡಬೇಕು. ಮನಸ್ಸನ್ನು ಗೆಲ್ಲಬೇಕಾದರೆ ಭಗವಂತನ ಒಲವು ಬೇಕು. ಮನಸ್ಸನ್ನು ಗೆದ್ದವನು ಇಂದ್ರಿಯಗಳನ್ನು ಗೆಲ್ಲುತ್ತಾನೆ-ಅದರಿಂದ ಆತ್ಮ ಶುದ್ಧಿಯಾಗುತ್ತದೆ. ಆಗ ಸರ್ವಭೂತಗಳಿಗೂ ಆತ್ಮಭೂತನಾದ ಭಗವಂತನೇ ನನ್ನ ಆತ್ಮ ಎನ್ನುವ ಅರಿವಾಗುತ್ತದೆ. ಸರ್ವಗತ, ಸರ್ವನಿಯಾಮಕ ಭಗವಂತ ನನ್ನೊಳಗೂ ಇದ್ದಾನೆ ಅವನೇ ವಿಶ್ವನಿಯಾಮಕನಾಗಿ ವಿಶ್ವದಲ್ಲಿ ತುಂಬಿದ್ದಾನೆ. ಜಗತ್ತನ್ನು ನಿಯಂತ್ರಿಸುವ ಅನಂತ ಶಕ್ತಿ ಅಣೋರ್ಣಿಯವಾಗಿ ನನ್ನ ಜೀವ ಸ್ವರೂಪದೊಳಗೂ ತುಂಬಿದೆ ಎನ್ನುವ ಅನುಷ್ಠಾನದಿಂದ, ಸರ್ವ ಭೂತಗಳಲ್ಲಿ ಅಂತರ್ಯಾಮಿಯಾದ ಭಗವಂತನಲ್ಲಿ ಮನಸ್ಸನ್ನು ನೆಲೆಗೊಳಿಸಿ ಕರ್ಮ ಮಾಡಿದಾಗ ನಮಗೆ ಕರ್ಮ ಅಂಟಿಕೊಳ್ಳುವುದಿಲ್ಲ. ಹಿಂದಿನ ಶ್ಲೋಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ :- https://vicharavisthara.com/bhagavad-gita-gitasara-chapter-5-verse-6 […]