Bhagavad Gita
ಅಧ್ಯಾಯ-1
ಶ್ಲೋಕ – 25
ಉವಾಚ ಪಾರ್ಥ ಪಶ್ಯೈತಾನ್ ಸಮವೇತಾನ್ ಕುರೂನಿತಿ ॥೨೫॥
ಭೀಷ್ಮ, ದ್ರೋಣರು, ಹಾಗು ಇತರ ಅರಸರು ನೇರವಾಗಿ ಕಣ್ಣಿಗೆ ಬೀಳುವಂತೆ ರಥವನ್ನು ನಿಲ್ಲಿಸಿ ಕೃಷ್ಣ ಹೇಳುತ್ತಾನೆ: “ಹೇ ಪಾರ್ಥ, ನೋಡು ಈ ನೆರೆದ ಕುರುಗಳನ್ನು” ಎಂದು.
ಶ್ರೀಕೃಷ್ಣನು ಅರ್ಜುನನ ಅಣತಿಯಂತೆ ರಥವನ್ನು ಎರಡೂ ಸೈನ್ಯದ ಮಧ್ಯದಲ್ಲಿ ತಂದು, ಭೀಷ್ಮ-ದ್ರೋಣರು ಮತ್ತು ಎಲ್ಲ ಅರಸರು ನೇರವಾಗಿ ಕಣ್ಣಿಗೆ ಕಾಣುವಂತೆ ನಿಲ್ಲಿಸಿ, ಭಾಂದವ್ಯವನ್ನು ಬಡಿದೇಳಿಸುವ ಧ್ವನಿಯಲ್ಲಿ ಹೇಳುತ್ತಾನೆ
“ಹೇ ಪಾರ್ಥ, ಇಲ್ಲಿ ಸೇರಿರುವ ನಿನ್ನ ‘ಕುರುಗಳನ್ನು‘ ನೋಡು” ಎಂದು.
ಇದು ಶ್ರೀಕೃಷ್ಣನ ಅದ್ಭುತ ಮಾನಸಿಕ ಚಿಕಿತ್ಸೆ(Psycho therapy). ಇಲ್ಲಿ ಅರ್ಜುನನ ಮನಃಸ್ಥಿತಿಯ ಪರೀಕ್ಷೆ ನಡೆಯುತ್ತಿದೆ. ಅರ್ಜುನ ಒಬ್ಬ ರಾಜ. ಆತನ ಮೂಲ ಕರ್ತವ್ಯ ಧರ್ಮದ ಪರ ಹೋರಾಟ ಮಾಡುವುದು ಹಾಗು ಪ್ರಜಾಪಾಲನೆ ಮಾಡುವುದು. ಹೀಗೆ ತನ್ನ ಕರ್ತವ್ಯ ಪಾಲನೆ ಮಾಡುತ್ತಿರುವಾಗ, ಧರ್ಮದ ವಿರುದ್ಧ ನಿಂತವರು ಯಾರೇ ಆಗಿರಲಿ, ಅವರನ್ನು ಶಿಕ್ಷಿಸುವುದು ಆತನ ಕರ್ತವ್ಯ. ಆತನೊಬ್ಬ ನ್ಯಾಯಾಧೀಶನಿದ್ದಂತೆ. ಇಲ್ಲಿ ನನ್ನ ಕುಟುಬದವರು, ನನ್ನ ಬಂಧುಗಳು, ನನ್ನ ಸ್ನೇಹಿತರು ಎನ್ನುವ ತಾರತಮ್ಯ ಸಲ್ಲದು. ಇಂತಹ ಜವಾಬ್ಧಾರಿಯುತ ಕಾರ್ಯದಲ್ಲಿ ತೊಡಗಿದ ಅರ್ಜುನ, ತನ್ನ ಸಮೀಪಬಂಧುಗಳನ್ನು, ಗುರುಗಳನ್ನು ಕಂಡಾಗ ಹೇಗೆ ಪರಿತಪಿಸುತ್ತಾನೆ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ನೋಡೋಣ.

[…] […]