Bhagavad Gita
ಅಧ್ಯಾಯ-1
ಶ್ಲೋಕ – 33
ಯೇಷಾಮರ್ಥೇ ಕಾಂಕ್ಷಿತಂ ನೋ ರಾಜ್ಯಂ ಭೋಗಾಃ ಸುಖಾನಿ ಚ ।
ತ ಇಮೇವಸ್ಥಿತಾ ಯುದ್ಧೇ ಪ್ರಾಣಾಂಸ್ತ್ಯಕ್ತ್ವಾ ಧನಾನಿ ಚ ॥೩೩॥
ತ ಇಮೇವಸ್ಥಿತಾ ಯುದ್ಧೇ ಪ್ರಾಣಾಂಸ್ತ್ಯಕ್ತ್ವಾ ಧನಾನಿ ಚ ॥೩೩॥
ಯೇಷಾಮ್ ಅರ್ಥೇ ಕಾಂಕ್ಷಿತಂ ನೋ ರಾಜ್ಯಂ ಭೋಗಾಃ ಸುಖಾನಿ ಚ ತೇ ಇಮೇ ಅವಸ್ಥಿತಾ ಯುದ್ಧೇ ಪ್ರಾಣಾನ್ ತ್ಯಕ್ತ್ವಾ ಧನಾನಿ ಚ-ಯಾರಿಗಾಗಿ ಅರೆಸೋತ್ತಿಗೆ?
ಸುಖ-ಭೋಗಕ್ಕಾಗಿ ಇವರು ಹರಣದ ಮತ್ತು ಹಣದ ಹಂಗು ತೊರೆದು ಕಾಳಗದ ಕಣದಲ್ಲಿ ನಿಂತಿದ್ದಾರೆ.
ಒಂದು ವೇಳೆ ಈ ರಾಜಭೋಗ ಬೇಕಿದ್ದರೆ ಅದು ಯಾರಿಗೋಸ್ಕರ? ನಮ್ಮೆಲ್ಲ ಗುರು ಹಿರಿಯರ ಮಧ್ಯ, ಸಂತೋಷದಿಂದ ನಾವಿರಬೇಕು. ಅವರನ್ನೆಲ್ಲಾ ಕೊಂದು ನಾವೇನು ಸಂತೋಷಪಡುವುದು? ಯಾರಿಗೋಸ್ಕರ ಈ ಜೀವನದ ಸುಖವನ್ನು ಸಾಮ್ರಾಜ್ಯವನ್ನು ಬಯಸುತ್ತಿದ್ದೆವೋ, ಅವರೆಲ್ಲರೂ ಪ್ರಾಣದ ಹಂಗನ್ನು ತೊರೆದು, ಸರ್ವಸ್ವವನ್ನೂ ಕಳೆದುಕೊಳ್ಳಲು ಸಿದ್ಧರಾಗಿ ನಮ್ಮೆದುರು ಯುದ್ಧಕ್ಕೆ ನಿಂತಿದ್ದಾರೆ.

[…] https://vicharavisthara.com/bhagavad-gita-shloka-33/ […]