ಅಧ್ಯಾಯ-1
ಶ್ಲೋಕ – 43
ಉತ್ಸಾದ್ಯನ್ತೇ ಜಾತಿಧರ್ಮಾಃ ಕುಲಧರ್ಮಾಶ್ಚ ಶಾಶ್ವತಾಃ ॥೪೩॥
ದೋಷೈ ಏತೈಃ ಕುಲಘ್ನಾನಾಮ್ ವರ್ಣಸಂಕರ ಕಾರಕೈಃ ಉತ್ಸಾದ್ಯನ್ತೇ ಜಾತಿಧರ್ಮಾಃ ಕುಲಧರ್ಮಾಃ ಚ ಶಾಶ್ವತಾಃ -ಸಮಾಜದ ಬಣ್ಣಗೇಡಿಗೆ ಕಾರಣರಾದ ಕುಲಗೇಡಿಗಳ ಇಂಥ ತಪ್ಪುಗಳಿಂದ ಸಹಜ ಧರ್ಮಗಳು ಮತ್ತು ಅಳಿವಿರದ ಕುಲಧರ್ಮಗಳು ನೆಲೆಗೆಡುತ್ತವೆ.
ಯುದ್ಧದಿಂದ ಸಮಾಜದ ಮೇಲೆ ಆಗುವ ನೇರ ಪರಿಣಾಮ ಎಂದರೆ, ನಾಯಕರಿಲ್ಲದ, ಯುವಕರಿಲ್ಲದ ಸಮಾಜ. ಗಂಡು-ಹೆಣ್ಣಿನ ಅನುಪಾತ ವ್ಯತ್ಯಾಸ.
ಇದು ಸರಿ ಹೊಂದಬೇಕಾದರೆ ಅದೆಷ್ಟು ವರ್ಷಗಳು ಬೇಕು? ನಾವು ಮಹಾಭಾರತ ಯುದ್ಧವನ್ನು ನೋಡಿದರೆ ಅಲ್ಲಿ ಕನಿಷ್ಠ ಐವತ್ತು ಲಕ್ಷ ಮಂದಿ ಜನ ಸತ್ತಿದ್ದಾರೆ. ಇಂತಹ ಮಹಾಯುದ್ಧದಿಂದ ಇಡೀ ಸಮಾಜ ನಾಶಮಾಡಿದ ಕುಲಕಂಟಕರು ನಾವಾಗುತ್ತೇವೆ ಎನ್ನುವುದು ಅರ್ಜುನನ ಕಳಕಳಿ. “ಸಮಾಜದ ವ್ಯವಸ್ಥೆ ನಾಶವಾಗುವುದರಿಂದ ಸ್ವಭಾವ ನಾಶವಾಗುತ್ತದೆ. ಇದರಿಂದ ಆಯಾ ಜೀವದ ಸ್ವಭಾವದ ಅಭಿವೃದ್ಧಿ ಆಗದೆ, ವ್ಯಕ್ತಿತ್ವ ವಿಕಸನ ನಾಶವಾಗುತ್ತದೆ. ಶಾಶ್ವತ ಮೌಲ್ಯದ ಸಮಾಜಧರ್ಮ ನಾಶವಾಗುತ್ತದೆ. ಅನಾದಿ ಕಾಲದಿಂದ ಸಮಾಜ ಒಪ್ಪಿಕೊಂಡು ಬಂದ ಸ್ಥಿರಧರ್ಮ ಕೊಚ್ಚಿಕೊಂಡು ಹೋಗುತ್ತದೆ” ಎಂದು ಅರ್ಜುನ ಕೃಷ್ಣನ ಮುಂದೆ ತನ್ನ ವಾದವನ್ನು ಮಂಡಿಸುತ್ತಾನೆ.

[…] 1.https://vicharavisthara.com/bhagavadgeethe-shloka-43-2/ ಭಗವದ್ಗೀತೆ – ದಿನಕ್ಕೊಂದು ಶ್ಲೋಕ –43 […]