ಅಧ್ಯಾಯ-1
ಶ್ಲೋಕ – 45
ಅಹೋ ಬತ ಮಹತ್ ಪಾಪಂ ಕರ್ತುಂ ವ್ಯವಸಿತಾ ವಯಮ್ ।
ಯದ್ ರಾಜ್ಯಸುಖಲೋಭೇನ ಹಂತುಂ ಸ್ವಜನಮುದ್ಯತಾಃ ॥೪೫॥
ಯದ್ ರಾಜ್ಯಸುಖಲೋಭೇನ ಹಂತುಂ ಸ್ವಜನಮುದ್ಯತಾಃ ॥೪೫॥
ಅಹೋ ಬತ ಮಹತ್ ಪಾಪಮ್ ಕರ್ತುಮ್ ವ್ಯವಸಿತಾ ವಯಮ್ ಯತ್ ರಾಜ್ಯಸುಖಲೋಭೇನ ಹಂತುಮ್ ಸ್ವಜನಮ್ ಉದ್ಯತಾಃ –
ಅಯ್ಯೋ….! ಎಂಥ ಹಿರಿಯ ತಪ್ಪನ್ನು ಮಾಡತೊಡಗಿದ್ದೆವು ನಾವು ! ದೊರೆತನದ ಸುಖದ ದುರಾಸೆಯಿಂದ ನಮ್ಮ ಮಂದಿಯನ್ನೇ ಕೊಲ್ಲ ಹೊರಟಿದ್ದೇವಲ್ಲ !
ಇಲ್ಲಿ ಅರ್ಜುನ ಕುಸಿದು ಬೀಳುವ ದ್ವನಿಯಲ್ಲಿ ಹೇಳುತ್ತಾನೆ- “ಅಯ್ಯೋ.. ಎಂಥ ದೊಡ್ಡ ದುರಂತ, ಎಂಥ ದೊಡ್ಡ ಪಾಪ ಕಾರ್ಯ ನಮ್ಮ ಮುಂದೆ ನಡೆಯುತ್ತಿತ್ತು? ಎಂಥ ಪ್ರಮಾದ ಆಗಿ ಹೋಗುತ್ತಿತ್ತು? ನಾವು ದೊಡ್ಡ ತಪ್ಪನ್ನು ಮಾಡಲು ಕೈ ಹಾಕುತ್ತಿದ್ದೆವು. ರಾಜ್ಯ ಸುಖದ ಲೋಭದಿಂದ ನಮ್ಮ ಜನರನ್ನೇ ನಾವು ಕೊಂದು ಇಡೀ ಜನಾಂಗವನ್ನು ಅಧಃಪಾತಕ್ಕೆ ತಳ್ಳುವ ಕೆಲಸ ನಮ್ಮಿಂದಾಗುತ್ತಿತ್ತು” ಎಂದು.
