ಸಕಲೇಶಪುರ: ತಾಲೂಕು ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಾವೆ ರಸ್ತೆಯ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಬಹು ದಶಕಗಳಿಂದ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದ್ದ ಈ ರಸ್ತೆ ಇದೀಗ ₹40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿದೆ.
ಗ್ರಾಮದ ಸಂಪರ್ಕ ವ್ಯವಸ್ಥೆ ಸುಧಾರಿಸಲು ಈ ರಸ್ತೆ ಬಹಳ ಮುಖ್ಯವಾಗಿದ್ದು, ಕಾಮಗಾರಿ ಆರಂಭವಾಗುತ್ತಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ರಸ್ತೆ ನಿರ್ಮಾಣದಿಂದ ಗ್ರಾಮಸ್ಥರ ಸಂಚಾರ ಸುಲಭವಾಗುವುದರ ಜೊತೆಗೆ ಕೃಷಿ ಉತ್ಪನ್ನಗಳ ಸಾಗಾಟಕ್ಕೂ ಅನುಕೂಲವಾಗಲಿದೆ.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿ ಎಂದು ಆಶಿಸಿದರು.
