BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್ : ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

ರಾಜ್ಯ ಸರ್ಕಾರದ ಹೊಸ ಆದೇಶದಂತೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅಡಿಯಲ್ಲಿ 2007-08ರಿಂದ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ 195 ಆಶಾ ಮೆಂಟರ್ಸ್‌ರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಈ ನಿರ್ಧಾರವನ್ನು ಆರೋಗ್ಯ ಇಲಾಖೆ ಪ್ರಕಟಿಸಿದ್ದು, ಆಶಾ ಕಾರ್ಯಕರ್ತೆಯರಿಗೆ ತರಬೇತಿ ಮತ್ತು ಮೇಲ್ವಿಚಾರಣೆಯ ಜವಾಬ್ದಾರಿಗಳನ್ನು ಇನ್ನು ಮುಂದೆ LHV/Sr HIO ಹಾಗೂ DNO ಅಧಿಕಾರಿಗಳು ನಿರ್ವಹಿಸುವಂತೆ ಸೂಚನೆ ನೀಡಿದೆ. ಅರ್ಹತೆಯಿರುವ ಮುಕ್ತಗೊಳಿಸಲಾದ ಸಿಬ್ಬಂದಿಗಳನ್ನು ಬೇರೆ ಖಾಲಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಪರಿಗಣಿಸಲಾಗಬಹುದು.