
ನವದೆಹಲಿ: ಪಾಕಿಸ್ತಾನದಲ್ಲಿ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಹೈಜಾಕ್ ಮಾಡಿದೆ. ಕೈಟ್ನಾದಿಂದ ಪೇಶಾವರಕ್ಕೆ ತೆರಳುತ್ತಿದ್ದ ಈ ರೈಲಿಗೆ ಉಗ್ರರು ಬೆಂಕಿ ಹಚ್ಚಿದ್ದು, 400ಕ್ಕೂ ಹೆಚ್ಚು ಪ್ರಯಾಣಿಕರು ಒತ್ತೆಯಾಳುಗಳಾಗಿದ್ದಾರೆ ಎಂದು ಬಿಎಲ್ಎ ಹೇಳಿಕೆ ನೀಡಿದೆ.
ಪಾಕಿಸ್ತಾನದ ಭದ್ರತಾ ಪಡೆಗಳು ಈ ಪ್ರದೇಶಕ್ಕೆ ದೌಡಾಯಿಸಿದ್ದು, ರೈಲು ಚಾಲಕ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನದ ರೈಲ್ವೆ ಅಧಿಕಾರಿಗಳ ಪ್ರಕಾರ, ದಾಳಿ ಪ್ರತ್ಯೇಕತಾವಾದಿ ಉಗ್ರ ಸಂಘಟನೆಯ ಕೈವಾಡವಿದೆ ಎನ್ನಲಾಗಿದೆ.
ಬಿಎಲ್ಎ ಉಗ್ರರು ದಾಳಿಯ ಜವಾಬ್ದಾರಿ ವಹಿಸಿಕೊಂಡಿದ್ದು, ಭದ್ರತಾ ಪಡೆಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.