ಹಾಸನ: ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೇಮಗಂಗೋತ್ರಿ (ಬರುಡಾಳು ಬಾರೆ) ಅರಣ್ಯ ಪ್ರದೇಶದಲ್ಲಿ ಸುಮಾರು 50 ವರ್ಷದ ಅಜ್ಞಾತ ಗಂಡಸಿನ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆತ ಸುಮಾರು 6 ರಿಂದ 7 ದಿನಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನು ನೇರಳೆ ಮತ್ತು ನೀಲಿ ಬಣ್ಣದ ಅರ್ಧ ತೋಳಿನ ಶರ್ಟ್ ಹಾಗೂ ನೈಟ್ ಪ್ಯಾಂಟ್ ಧರಿಸಿದ್ದಾನೆ. ಶವವು ಗುರುತಿಸಲು ಅಸಾಧ್ಯವಾಗುವ ಮಟ್ಟಿಗೆ ದುರ್ವಾಸನೆಯಾಗಿರುವುದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಯಾರಾದರೂ ಈ ವ್ಯಕ್ತಿಯನ್ನು ಗುರುತಿಸುವವರು ಇದ್ದಲ್ಲಿ ಅಥವಾ ಈ ಸಂಬಂಧವಾಗಿ ಯಾವುದೇ ಮಿಸ್ಸಿಂಗ್ ಕೇಸ್ ದಾಖಲಾಗಿದ್ದರೆ, ಶಾಂತಿಗ್ರಾಮ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ. ಸಂಪರ್ಕಿಸಲು ದೂರವಾಣಿ ಸಂಖ್ಯೆ — 9480804783 ಅಥವಾ 08172-258038.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

[…] […]