ಹಾಸನದ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ರಾತ್ರಿಯೇ ತೀವ್ರ ತಪಾಸಣೆ

ಹಾಸನ ಜಿಲ್ಲೆಯ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಇಮೇಲ್ ಮೂಲಕ ಬಾಂಬ್ ಸ್ಪೋಟದ ಬೆದರಿಕೆ ನೀಡಿದ ಘಟನೆ ನಡೆದಿದೆ. ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾದರೂ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಈ ಬೆದರಿಕೆಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮನೆಮಾಡಿದೆ.