
ಪುಸ್ತಕ ಮೇಳದಲ್ಲಿ ಭಾಗವಹಿಸಲು ನಾಡಿನ ಪ್ರಕಾಶಕರು/ ಮಾರಾಟಗಾರರಿಂದ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,೦೦೦/-ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025 ನೇ ಫೆಬ್ರವರಿ 12 ರಂದು ಸಂಜೆ 5 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.