
ಹಾಸನ :- ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆ 27 ರಿಂದ ಮಾ.೦3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು” ಏರ್ಪಡಿಸಲಾಗುವುದು. ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದೆ.
ಮಳಿಗೆಯೊಂದಕ್ಕೆ ರೂ.1000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರ ಹೆಸರಿನಲ್ಲಿ ಸಲ್ಲಿಸುವುದು. ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ಸೈಟ್ನಲ್ಲಿ ಅಂದರೆ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:12.02.2025 ರಂದು ಸಂಜೆ ೫ ರೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ ೭೫ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು-560001 ದೂ:080-22381350 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಧಾನ ಸಭೆ ಸಚಿವಾಲಯದ ಕಾರ್ಯದರ್ಶಿ ತಿಳಿಸಿದ್ದಾರೆ.