ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ.
ತೆರೆದ ಮೈದಾನದಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಬೆಂಕಿಗೆ ಆಹುತಿಯಾಗಿರುವುದನ್ನು ದೃಶ್ಯಗಳು ತೋರಿಸಿವೆ. ದೇವಾಲಯಕ್ಕೆ ಹೋಗುವಾಗ ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವೆ ಅಪಘಾತ ಸಂಭವಿಸಿದೆ.
ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಹೆಲಿಕಾಪ್ಟರ್ ಪತನವನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಅವರು ದೃಢಪಡಿಸಿದ್ದಾರೆ.
ಘಟನೆ ವೇಳೆ ಹೆಲಿಕಾಪ್ಟರ್ ನಲ್ಲಿ ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
