ಇಸ್ರೇಲ್-ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ತುರ್ತು ಸಂಪುಟ ಸಭೆ ಕರೆದಿದ್ದಾರೆ.
ಇಸ್ರೇಲ್-ಇರಾನ್ ಸಂಘರ್ಷ ಮುಂದುವರೆದಿದ್ದು, ಇದೀಗ ಅಮೆರಿಕ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ.
ತಡರಾತ್ರಿ ಇರಾನ್ ನ 3 ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದೆ.
ಇರಾನ್ನಲ್ಲಿ ನಮ್ಮ ಅತ್ಯಂತ ಯಶಸ್ವಿ ಮಿಲಿಟರಿ ಕಾರ್ಯಾಚರಣೆಯ ಕುರಿತು ನಾನು ರಾತ್ರಿ 10:00 ಗಂಟೆಗೆ ಶ್ವೇತಭವನದಲ್ಲಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತೇನೆ. ಇದು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ಇಸ್ರೇಲ್ ಮತ್ತು ಪ್ರಪಂಚಕ್ಕೆ ಒಂದು ಐತಿಹಾಸಿಕ ಕ್ಷಣವಾಗಿದೆ. ಇರಾನ್ ಈಗ ಈ ಯುದ್ಧವನ್ನು ಕೊನೆಗೊಳಿಸಲು ಒಪ್ಪಿಕೊಳ್ಳಬೇಕು. ಧನ್ಯವಾದಗಳು!” ಎಂದು ಅಧ್ಯಕ್ಷ ಟ್ರಂಪ್ ಪೋಸ್ಟ್ ಮಾಡಿದ್ದಾರೆ.

[…] […]