ಚನ್ನರಾಯಪಟ್ಟಣ: ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಾಚರಣೆ ಸಮಿತಿಯ ಚನ್ನರಾಯಪಟ್ಟಣ ತಾಲೂಕು ಘಟಕದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಿ.ಎಂ. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ.
ಇವರ ಆಯ್ಕೆಯ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿಶ್ಚಲಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಾಧೀಶರಾದ ವೆಂಕಟೇಶ್, ತಾಲೂಕು ಸಮಿತಿಯ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ಎ.ಎಂ. ಜಯರಾಮ್, ಶ್ರೀಮತಿ ಪುಷ್ಪ, ಯಶೋಧಾ ಜೈನ್, ಸಿದ್ದೇಶ್, ಮಹಾದೇವ್, ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದು ಅಭಿನಂದಿಸಿದರು.
– ಮಂಜುನಾಥ್ ಐ ಕೆ
