ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂ.ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ (Cabinet Meeting) ಒಪ್ಪಿಗೆ ನೀಡಿದೆ.
ಸಿಬ್ಬಂದಿಯಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ಗುರುವಾರ (ಜೂ. 19)ದ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.
ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ARS) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ
