ಕೊರಟಗೆರೆ :- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಶ್ರೇಯಸ್ಸಿಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಸನ್ಮಾನಿಸಲು ಸರ್ಕಾರ ತೀರ್ಮಾನಿಸಿದ್ದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏಪ್ರಿಲ್ 5ರಂದು ನಡೆಯುವ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಸಮಾಜ ಸೇವೆ, ಶಿಕ್ಷಣ, ಸಮಾನತೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಹರು ತಮ್ಮ ಸೇವಾ ವಿವರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 8ರೊಳಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಯಮುನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
