ಬೆಂಗಳೂರು: ದಕ್ಷಿಣ ಭಾರತದ ಪ್ರಮುಖ ಆಹಾರ ಪದಾರ್ಥವಾಗಿರುವ ಹಾಗೂ ಅನಾರೋಗ್ಯ ಪಿಡೀತರಿಗೂ ಇಷ್ಟವಾಗುವ ಇಡ್ಲಿಯಿಂದ ಜನರ ಆರೋಗ್ಯ ಹಾಳಾಗುತ್ತದೆ, ಕ್ಯಾನ್ಸರ್ ಬರಲಿದೆ ಎಂಬ ಅಂಶ ಬಹಿರಂಗವಾಗಿದೆ.
ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಲಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಖಚಿತಪಡಿಸಿದ್ದಾರೆ.
ಹೌದು, ಇಡ್ಲಿ ತಯಾರಿಕೆ ವೇಳೆ ಬಳಕೆ ಮಾಡುವ ಪ್ಲಾಸ್ಟಿಕ್ ನಿಂದಾಗಿ ಕ್ಯಾನ್ಸರ್ ಕಾರಕ ಅಂಶಗಳು ಹೊರ ಸೂಸುತ್ತವೆ. ಇದನ್ನು ತಿನ್ನುವುದರಿಂದ ಕಾಯಿಲೆಗಳು ಬರುವ ಸಾಧ್ಯತೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.ಈ ಸಂಬಂಧ ಇನ್ನಷ್ಟು ವರದಿಗಳು ಸರ್ಕಾರದ ಕೈ ಸೇರಲಿವೆ. ಇದಕ್ಕೆ ಎರಡು ದಿನ ಬೇಕಾಗಬಹುದು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ”ಆಹಾರ ತಯಾರಿಕೆಯಲ್ಲಿ ಅದರಲ್ಲೂ ಇತ್ತೀಚೆಗೆ ಹೆಚ್ಚಾಗಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಇದು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ.
ಹೀಗಾಗಿ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಈ ಕುರಿತು ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.
ನೂರಾರು ಇಡ್ಲಿ ಸ್ಯಾಂಪರ್ ಪರೀಕ್ಷೆ: ರಾಜ್ಯ ಆರೋಗ್ಯ ಇಲಾಖೆಯು ಇತ್ತೀಚೆಗೆ ವಿವಿಧ ಕಡೆಯಿಂದ ಇಡ್ಲಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವ ಸ್ಥಳಗಳಿಂದ 500 ಸ್ಯಾಂಪಲ್ಗಳ ಮಾದರಿಯನ್ನು ಪರಿಶೀಲಿಸಿದ್ದಾರೆ.
ಇದರಲ್ಲಿ 35 ವರದಿಗಳು ನಾರ್ಮಲ್ ಎಂದು ಬಂದರೆ, ಹಲವು ವರದಿಯಲ್ಲಿ ಕಟು ಸತ್ಯ ಬಯಲಾಗಿದೆ.
