ಬೆಂಗಳೂರು, ಆಗಸ್ಟ್ 28: ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ಜಾತಿ ಮತ್ತು ಉಪಜಾತಿಗಳ ಕುರಿತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ: 13.08.2025 ರಲ್ಲಿ, ಎಲ್ಲಾ ಹಿಂದುಳಿದ ವರ್ಗಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳನ್ನು ಒಳಗೊಂಡ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಜಾತಿ/ಉಪಜಾತಿಗಳ ವಿವರಗಳ ಬಗ್ಗೆ ಸಲಹೆ, ಸೂಚನೆ ಅಥವಾ ಮಾಹಿತಿ 01.09.2025 ರ ಸಂಜೆ 5.00 ಗಂಟೆಯವರೆಗೆ ನೀಡಬಹುದು ಎಂದು ಸೂಚಿಸಲಾಗಿದೆ. ಸಂಗ್ರಹಿಸಲಾದ ಮಾಹಿತಿ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಬಳಸಲಾಗುವುದು.
ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ಮನವಿಗಳನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16 ಡಿ. ಡಿ. ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು ಅಥವಾ ಇ-ಮೇಲ್: kscbcb@gmail.com ಗೆ ಕಳುಹಿಸಬಹುದು.
