ವಿಚಾರ 🌏 ವಿಸ್ತಾರ

ಭಗವಂತನ ರೂಪವನ್ನು ಈ ನಮ್ಮ ಹೊರಗಣ್ಣಿನಿಂದ ಕಾಣಲು ಸಾಧ್ಯವಿಲ್ಲ. ಸ್ವರೂಪಭೂತನಾದ ಆ ಭಗವಂತನನ್ನು ನಾವು ನಮ್ಮ ಸ್ವರೂಪಭೂತವಾದ ಕಣ್ಣಿನಿಂದ ಮಾತ್ರ ನೋಡಲು ಸಾಧ್ಯ.
ಇಲ್ಲಿ ನೋಡೀಗ, ನನ್ನ ಮೈಯಲ್ಲಿ ಚರಾಚರಗಳಿಂದ ಕೂಡಿದ ಇಡಿಯ ಜಗತ್ತು ಒಂದುಗೂಡಿದ್ದನ್ನು. ಓ ಗುಡಾಕೇಶ, ಇನ್ನೇನು ನೋಡ ಬಯಸುವೆ ಅದನ್ನೆಲ್ಲಾ ನೋಡು.
ಬಹೂನಿ ಅದೃಷ್ಟ ಪೂರ್ವಾಣಿ ಪಶ್ಯ ಆಶ್ಚರ್ಯಾಣಿ ಭಾರತ -- ನೋಡು-ಆದಿತ್ಯರನ್ನು, ವಸುಗಳನ್ನು, ರುದ್ರರನ್ನು, ಅಶ್ವಿಗಳನ್ನು ಮತ್ತು ಮರುತ್ತುಗಳನ್ನು. ಓ ಭಾರತ, ನೋಡು ಹಿಂದೆಂದೂ...