ವಿಚಾರ 🌏 ವಿಸ್ತಾರ

ಸಂನ್ಯಾಸದಲ್ಲಿ ಎರಡು ವಿಧ. ಒಂದು ಕರ್ಮದ ಫಲವನ್ನು ಬಿಡುವುದು, ಇನ್ನೊಂದು ಬಯಕೆಗಳಿಂದ ಪ್ರೇರಿತವಾದ ಕರ್ಮವನ್ನೇ ತ್ಯಾಗ ಮಾಡುವುದು.
ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. ಹಾಗಾಗಿ ಅರ್ಜುನ ಕೃಷ್ಣನಲ್ಲಿ ಕರ್ಮತ್ಯಾಗ ಮತ್ತು ಕರ್ಮಸಂನ್ಯಾಸ ಇವೆರಡರ ನಡುವಿನ ಅಂತರವೇನು ಎಂದು ಕೇಳುತ್ತಾನೆ.
ಭಗವಂತನಲ್ಲಿ ಶ್ರದ್ದೆ ಇಲ್ಲದೆ, ಯಾರದ್ದೋ ಒತ್ತಾಯಕ್ಕಾಗಿ, ಅಥವಾ ಭಯದಿಂದ, ಪೂರ್ಣ ನಂಬಿಕೆ ಇಲ್ಲದೆ ಮಾಡುವ ಕ್ರಿಯೆ ವ್ಯರ್ಥ.