ವಿಚಾರ 🌏 ವಿಸ್ತಾರ

ಜೀವ ಮತ್ತು ಶರೀರದ ಕೂಡುವಿಕೆಗೆ ಕಾರಣಳಾದವಳು ತಾಯಿ-ಶ್ರೀಲಕ್ಷ್ಮಿ. ಸದಾ ನಿರ್ಲಿಪ್ತಳಾಗಿ, ಯಾವುದೇ ಲೇಪವಿಲ್ಲದೆ, ಪ್ರಪಂಚವನ್ನು ವ್ಯವಸ್ಥೆಗೊಳಿಸಿದ ಶಕ್ತಿ –ಜಗನ್ಮಾತೆ ಶ್ರೀಲಕ್ಷ್ಮಿ. ಇವಳು ಅಕ್ಷರಪುರುಷಳು.
ಎಲ್ಲ ಜೀವರ ಒಳಗೂ ಅಂಗುಷ್ಠಮಾತ್ರನಾಗಿ ಎಂದೆಂದೂ ದುಃಖದ ಲೇಪವಿಲ್ಲದೆ ನಿರ್ಲಿಪ್ತನಾಗಿ ಭಗವಂತ ತುಂಬಿದ್ದಾನೆ. ಮಧ್ವಾಚಾರ್ಯರು ಕಠೋಪನಿಷತ್ತಿಗೆ ಭಾಷ್ಯ ಬರೆಯುತ್ತ ಹೇಳುತ್ತಾರೆ: