ಕೆ.ಆರ್. ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ವಿನಾಯಕ ಬಡಾವಣೆಯಲ್ಲಿರುವ ಲಕ್ಷ್ಮೀ ಕೋಂ ಶ್ರೀನಿವಾಸ್ ಎಂಬುವವರಿಗೆ ಸೇರಿದ ಜಾನುವಾರು ಮೇವಿನ ಮೆದೆಗೆ ಶುಕ್ರವಾರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಮಾರು 50ಸಾವಿರ ರೂ ಬೆಲೆ ಬಾಳುವ ಮೇವು ಸುಟ್ಟು ಕರಕಲಾಗಿದೆ.

ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ಕೂಡಲೇ ಕೆ.ಆರ್.ಪೇಟೆ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಸೋಮಶೇಖರಗೌಡ, ಸಿಬ್ಬಂದಿಗಳಾದ ಶ್ರೀಕಾಂತ್, ಮೋಹನ್ ಕುಮಾರ್, ಅಶೋಕ್, ಮಾಲತೇಶ್ ನೇತೃತ್ವದ ಅಗ್ನಿಶಾಮಕ ಅಧಿಕಾರಿಗಳ ತಂಡವು ಸ್ಥಳಕ್ಕೆ ದೌಡಾಯಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿ ಬೆಂಕಿಯು ಅಕ್ಕಪಕ್ಕದಲ್ಲಿರುವ ಮನೆಗಳಿಗೆ ಬೆಂಕಿಯು ಆವರಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಕಾಲಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ ಅಗ್ನಿ ಶಾಮಕ ಅಧಿಕಾರಿಗಳಿಗೆ ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲೋಲಾಕ್ಷಿಜಗದೀಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ವಿನೂತ ಸುರೇಶ್ ಸೇರಿದಂತೆ ಗ್ರಾಮದ ವಿವಿಧ ಮುಖಂಡರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಘಟನೆಯಲ್ಲಿ ಹುಲ್ಲಿನ ಮೆದೆ ಸುಟ್ಟು ಹೋದ ಕಾರಣ ನಷ್ಟಕ್ಕೆ ಒಳಗಾಗಿರುವ ರೈತರಾದ ಲಕ್ಷ್ಮೀಶ್ರೀನಿವಾಸ್ ಅವರಿಗೆ ಸರ್ಕಾರ ಹಾಗೂ ತಾಲ್ಲೂಕು ಆಡಳಿತದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
– ಶ್ರೀನಿವಾಸ್ ಆರ್.
