ಚಾಮರಾಜನಗರ, ಮೇ 23- ಮೈಸೂರಿನ ಜೆಎಸ್ಎಸ್ ಮಹಾವಿದ್ಯಾ ಪೀಠ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ 2023ನೇ ಸಾಲಿನ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಜಿಲ್ಲೆಯ ವಿಜಯ ಕರ್ನಾಟಕ ಪತ್ರಿಕೆ ಹಿರಿಯ ವರದಿಗಾರ ಕೆ.ಎಸ್. ಪಾಲಲೋಚನ ಆರಾಧ್ಯ ಅವರು ಆಯ್ಕೆಯಾಗಿದ್ದು, ಮೇ ೨೬ರ ಸೋಮವಾರ ಬೆಳಗ್ಗೆ 11೧ ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ.
ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಸಹಯೋಗದಲ್ಲಿ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದಾರೆ.
ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪನಾಗ್, ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿಗಳಾದ ಶಿವಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ವಹಿಸಲಿದ್ದಾರೆ.

[…] […]