ಚನ್ನರಾಯಪಟ್ಟಣ: ಗಾಂಧೀ ಜಯಂತಿ ಅಂಗವಾಗಿ ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಸಾರಿದ ಶಾಂತಿ, ಅಹಿಂಸೆ ಹಾಗೂ ತ್ಯಾಗದ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಗಾಂಧೀಜಿಯವರ ತತ್ವ, ಸಿದ್ಧಾಂತಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ಸಮಾಜಕ್ಕೆ ಮಾದರಿಯಾಗುವ ಜೀವನ ನಡೆಸಬಹುದು. ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಮೆಡಿಕಲ್ ವೆಂಕಟೇಶ್, ಪರಿಸರ ಪ್ರೇಮಿ ಸಿ.ಎನ್. ಅಶೋಕ್, ರಘು, ಸಿ.ಎಂ. ರವೀಂದ್ರ, ರವೀಂದ್ರ ಆರ್ಟ್ಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ
