ಚನ್ನರಾಯಪಟ್ಟಣ: ಫೆಬ್ರವರಿ 12ರಂದು ಭಾರತ್ ಬಂದ್ ಕರೆ ನೀಡಲಾಗಿದೆ ಎಂದು ಕಾರ್ಮಿಕ ಸಂಘಟನೆ ಮುಖ್ಯಸ್ಥ ಮಂಜುನಾಥ್ ತಿಳಿಸಿದರು. ಪಟ್ಟಣದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಕಾರ್ಮಿಕ ಸಂಘಟನೆಗಳ ಸಂಯುಕ್ತ ಆಶಯದಲ್ಲಿ ಬೃಹತ್ ಮೆರವಣಿಗೆ ಮತ್ತು ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಕಾರ್ಮಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಈ ಪ್ರತಿಭಟನೆಗೆ ಗ್ರಾಮ ಪಂಚಾಯತಿ ಕಾರ್ಮಿಕ ಸಂಘಟನೆ, ಅಂಗನವಾಡಿ ಕಾರ್ಯಕರ್ತ ಸಂಘಟನೆ, ರೈತ ಸಂಘಟನೆಗಳು, ದಲಿತ ಪರ ಸಂಘಟನೆಗಳು, ರಸ್ತೆ ಬದಿಯ ವ್ಯಾಪಾರಸ್ಥರ ಸಂಘಟನೆಗಳು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ನಮ್ಮೊಂದಿಗೆ ಕೈಜೋಡಿಸಿ ಬೆಂಬಲ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಸಂಘಟನೆಯ ಮುಖಂಡರಾದ ಗೊಲ್ಲರಹೊಸಹಳ್ಳಿ ಮಂಜುನಾಥ್, ಕಲ್ಕೆರೆ ವಾಸುದೇವ್, ರೈತ ಸಂಘಟನೆಯ ಮುಖಂಡರಾದ ಹಿರಿಸೇವೆ ರಘು, ಮಡಬಮಂಜು, ಅಂಗನವಾಡಿ ಸಂಘಟನೆಗಳ ಅಧ್ಯಕ್ಷರಾದ ನಾಗರತ್ನ, ಸುಜಾತಾ ಕುಮಾರಸ್ವಾಮಿ, ಚಂದ್ರು, ಗೋವಿನಕೆರೆ ತೇಜಸ್, ಜೋಗಿಪುರ ಮಂಜೇಗೌಡ, ಜಾವೀದ್, ಮಡಬಲೋಕೇಶ್, ಸೇರಿದಂತೆ ಇತರ ಹಾಜರಿದ್ದರು.
ವರದಿ : ಐ ಕೆ ಮಂಜುನಾಥ್
