ಚನ್ನರಾಯಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ರಾಷ್ಟ್ರೀಯ ನಾಯಕಿ ಮಾಯಾವತಿಯವರ ಹುಟ್ಟುಹಬ್ಬದ ಅಂಗವಾಗಿ ಹಾಸನ ವಿಭಾಗ ಮಟ್ಟದ ಬಿಎಸ್ಪಿ ಸಮಾವೇಶವನ್ನು ಆಯೋಜಿಸಲಾಗಿತ್ತು.
ಈ ಸಮಾವೇಶದಲ್ಲಿ ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ ಎಂ. (ಮಂಡ್ಯ), ರಾಜ್ಯ ಉಪಾಧ್ಯಕ್ಷರಾದ ಜಾಕಿರ್ ಹುಸೇನ್, ರಾಜ್ಯ ಸಂಯೋಜಕರು ಹಾಗೂ ಹಾಸನ ವಿಭಾಗದ ಉಸ್ತುವಾರಿಗಳಾದ ಗಂಗಾಧರ್ ಬಹುಜನ್, ರಾಜ್ಯ ಕಾರ್ಯದರ್ಶಿಗಳಾದ ಅತ್ನಿ ಹರೀಶ್ ಮತ್ತು ಶ್ರೀಮತಿ ಸುಧಾ ಭಾಗವಹಿಸಿದ್ದರು. ಅಲ್ಲದೆ ಹಾಸನ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ್ ಕೀರ್ತಿ, ಜಿಲ್ಲಾ ಉಸ್ತುವಾರಿಗಳಾದ ಮಲ್ಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಜಿ. ಸೋಮಶೇಖರ್, ತಾಲೂಕು ಅಧ್ಯಕ್ಷರಾದ ರಾಜು ಮಾಸ್ಟರ್ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಉಪ ತಹಸಿಲ್ದಾರ್ ಶಿವಣ್ಣ, ಬಿಎಸ್ಪಿ ಮುಖಂಡರಾದ ಸಿದ್ದಲಿಂಗಯ್ಯ, ನಂಜುಂಡಯ್ಯ ಸೇರಿದಂತೆ ಹಲವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ಬಹುಜನರ ಹಿತಕ್ಕಾಗಿ ನಡೆಸಬೇಕಾದ ಸಂಘಟನಾ ಕಾರ್ಯಗಳ ಕುರಿತು ಚರ್ಚಿಸಲಾಯಿತು.
ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಸಮಾಜಮುಖಿ ಹೋರಾಟ, ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ, ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪವನ್ನು ನಾಯಕರು ವ್ಯಕ್ತಪಡಿಸಿದರು.
– ಮಂಜುನಾಥ್ ಐ.ಕೆ
