ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 21000 ಮೀಟರ್ ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಮೈಸೂರಿನ ಯುವರಾಜ ಕಾಲೇಜಿನ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಹಾಗೂ ಚನ್ನರಾಯಪಟ್ಟಣದ ಶ್ರೀಮತಿ ಜ್ಯೋತಿಲಕ್ಷ್ಮಿ ಮತ್ತು ಶ್ರೀ ಸಿ ಎನ್ ಅರುಣ್ ಕುಮಾರ್ ಅವರ ಪುತ್ರರಾದ ಸಿ ಎ ಸೃಜನ್ ರವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 21 ಸಾವಿರ ಮೀಟರ್ ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಮೂರು ವಿಭಾಗದಲ್ಲಿ ವಿಜಯ ಸಾಧಿಸಿ, ಎರಡು ಚಿನ್ನ ಪದಕ, ಒಂದು ಬೆಳ್ಳಿಯ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುವ ಸಿ ಎ ಸೃಜನ್ ಅವರ ಕ್ರೀಡಾ ಸಾಧನೆಯನ್ನು ಗುರುತಿಸಿ ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಂ ಶಿವಲಿಂಗೇಗೌಡ, ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ ಪಟೇಲ್, ವಿಧಾನ ಪರಿಷತ್ ಶಾಸಕರಾದ ಡಾ. ಸೂರಜ್ ರೇವಣ್ಣ, ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷರಾದ ಲಲಿತ್ ರಾಘವ್ (ದೀಪು), ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ಮಾಜಿ ಶಾಸಕರಾದ ಸಿ ಎಸ್ ಪುಟ್ಟೇಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ ಎ ಗೋಪಾಲಸ್ವಾಮಿ, ಬಿಜೆಪಿ ಮುಖಂಡರಾದ ಸಿ ಆರ್ ಚಿದಾನಂದ್, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಅಣತಿ ಆನಂದ್, ಮಾಜಿ ಪುರಸಭಾ ಅಧ್ಯಕ್ಷರಾದ ಶಶಿಧರ್, ಕೋಟೆಮೋಹನ್, ಶ್ರೀಮತಿ ಬನಶಂಕರಿ ರಘು, ಶ್ರೀಮತಿ ರೇಖಾ ಅನಿಲ್, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮುರಾರ್ಜಿ ಮಂಜಣ್ಣ, ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯದ್ಯಕ್ಷರಾದ ಸಿ ಎನ್ ಅಶೋಕ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಕಾಳೇನಹಳ್ಳಿ ಆನಂದ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷರಾದ ರವಿ ನಾಕಲಗೋಡು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಎಚ್ ಎನ್ ಲೋಕೇಶ್, ಉದ್ಯಮಿಗಳಾದ ಕುಂಬೆನಹಳ್ಳಿ ಮನೋಹರ್, ದಿಂಡಗೂಡು ಆನಂದ್, ಸೇರಿದಂತೆ ವಿವಿಧ ಗಣ್ಯರು ಶುಭ ಹಾರೈಸಿದ್ದಾರೆ.
- ಮಂಜುನಾಥ್ ಐ.ಕೆ.
