ಚನ್ನರಾಯಪಟ್ಟಣ: ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಶೀಘ್ರ ಅನಾವರಣಗೊಳಿಸುವಂತೆ ಆಗ್ರಹಿಸಿ ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಮೆ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಿದ ಮುಖಂಡರು, ತಾಲೂಕು ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ಅನಾವರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಮೆ ಅನಾವರಣ ವಿಳಂಬವಾದರೆ ನಾಳೆಯಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಲಿತಪರ ಸಂಘಟನೆಗಳು, ಡಾ. ಬಿ.ಆರ್. ಅಂಬೇಡ್ಕರ್ ಹಿರಿಯ ನಾಗರಿಕ ವೇದಿಕೆ ಹಾಗೂ ಬಹುಜನ ಸಮಾಜ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.
– ಮಂಜುನಾಥ್ ಐ.ಕೆ.
