ಚನ್ನರಾಯಪಟ್ಟಣದ 40 ಅಡಿ ಆಂಜನೇಯ ದೇವಸ್ಥಾನದ ಮುಂಭಾಗ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಧರ್ಮ ಸತ್ಯ ಯಾತ್ರೆಗೆ ಚಾಲನೆ ನೀಡಿದ ಶಾಸಕ ಸಿ.ಎನ್. ಬಾಲಕೃಷ್ಣ, ಧರ್ಮಸ್ಥಳದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ತಮ್ಮ ಸ್ವಂತ ವಾಹನಗಳಲ್ಲಿ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದರು.
