ಚನ್ನರಾಯಪಟ್ಟಣ: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲ್ಲೂಕು ಘಟಕ ಚನ್ನರಾಯಪಟ್ಟಣ ಇವರ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಚನ್ನರಾಯಪಟ್ಟಣ ಕಾಲೇಜಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಔಷಧಿಗಳು, ಮಾತ್ರೆ ಮತ್ತು ಇತರೆ ತುರ್ತು ಚಿಕಿತ್ಸೆ ಸಾಮಗ್ರಿಗಳನ್ನು ನೀಡಲಾಯಿತು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶ್ರೀ ಭರತ್ ಕುಮಾರ್ ಹೆಚ್ .ಜಿ ಚೇರ್ಮನ್ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ತಾಲ್ಲೂಕು ರವರು ಮಾತನಾಡಿ ವಿದ್ಯಾಭ್ಯಾಸದ ಸಂದರ್ಭದಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಎನ್.ಎಸ್.ಎಸ್(NSS) ಘಟಕಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳನ್ನು ಸ್ವಯಂಸೇವಕರಾಗಿ ಹಾಗೂ ಶಿಸ್ತು ಮತ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಪ್ರತಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುತ್ತಾರೆ.

ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗುವಂತೆ ಹಾಗೂ ಶಿಕ್ಷಕರಿಗೆ ಮತ್ತು ತಂದೆ ತಾಯಿಗೆ ಗೌರವ ಸಿಗುವಂತೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವುದು ನಿಮ್ಮ ಕರ್ತವ್ಯವಾಗಿರುತ್ತದೆ ಆದ್ದರಿಂದ ಹೆಚ್ಚಿನ ರೀತಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಹಾಗೂ ಸೋಶಿಯಲ್ ಮೀಡಿಯಾ ಬಳಕೆ ಕಡಿಮೆ ಮಾಡಿ ವಿದ್ಯಾಭ್ಯಾಸದ ಬಗ್ಗೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮತ್ತು ತಾಳ್ಮೆ ಸ್ವಭಾವ ಹಾಗೂ ಹಿರಿಯರನ್ನು ಗೌರವಿಸುವುದು ಮತ್ತು ಒಳ್ಳೆ ಸ್ನೇಹವನ್ನು ಬೆಳೆಸುವುದು ಭವಿಷ್ಯದಲ್ಲಿ ಉತ್ತಮವಾದ ಜೀವನ ನಡೆಸಲು ಸಾಧ್ಯವಾಗುತ್ತದೆ ಮತ್ತು ಇಂಥ ಎನ್.ಎಸ್.ಎಸ್ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಭಾಗವಹಿಸುವುದರಿಂದ ಸಾರ್ವಜನಿಕರಿಗೆ ಹಾಗೂ ಅನಕ್ಷರಸ್ಥರಿಗೆ ಸಹಾಯ ಮಾಡುವ ಮನೋಭಾವನೆ ಬೆಳೆಯುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಗಂಗೇಗೌಡ ಎಸ್ .ಹೆಚ್ ರವರು ಪ್ರಾಂಶುಪಾಲರು ಪ್ರಥಮ ದರ್ಜೆ ಕಾಲೇಜು ಚನ್ನರಾಯಪಟ್ಟಣ ವಹಿಸಿದರು,
ಈ ಕಾರ್ಯಕ್ರಮದ ಉಪಸ್ಥಿತಿಯಲ್ಲಿ ಶ್ರೀಯುತ ಶಿವಕುಮಾರ್ ಎನ್.ಎಸ್.ಎಸ್ ಘಟಕದ ಮುಖ್ಯಸ್ಥರು, ಶ್ರೀಯುತ ಪ್ರಕಾಶ್ ಪ್ರಾಧ್ಯಾಪಕರು, ಕಾಲೇಜು ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮತ್ತು ಗುಲಸಿಂದ ಗ್ರಾಮಸ್ಥರು ಭಾಗವಹಿಸಿದ್ದರು.
– ಮಂಜುನಾಥ್ ಐ.ಕೆ
