ಚನ್ನರಾಯಪಟ್ಟಣ, ನ. 3:ಹಾಸನ ಜಿಲ್ಲಾಡಳಿತದಿಂದ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚನ್ನರಾಯಪಟ್ಟಣ ತಾಲೂಕಿನ ಹಿರಿಬಿಳ್ತಿ ಗ್ರಾಮದ ಜನಪ್ರಿಯ ಜಾನಪದ ಗಾಯಕ ಹಾಗೂ ಕನ್ನಡಪರ ಹೋರಾಟಗಾರ ಎಚ್.ಎಸ್. ಮಂಜುನಾಥ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಾಯಿತು.
ಹಾಸನ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಕೃಷ್ಣ ಭೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಪಿ. ಸ್ವರೂಪ್, ಜಿಲ್ಲಾಧಿಕಾರಿ ಲತಾ ಕುಮಾರಿ, ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ಪ್ರಶಸ್ತಿಯ ಮೂಲಕ ಎಚ್.ಎಸ್. ಮಂಜುನಾಥ್ ಅವರ ಜನಪದ ಕಲೆ ಹಾಗೂ ಕನ್ನಡಾಭಿಮಾನಿ ಹೋರಾಟಗಳಿಗೆ ರಾಜ್ಯ ಮಟ್ಟದಲ್ಲಿ ಮಾನ್ಯತೆ ದೊರೆತಿದೆ.
-ಮಂಜುನಾಥ್ ಐ.ಕೆ.
