ಚನ್ನರಾಯಪಟ್ಟಣ: ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕಿನ ವಳಂಬಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ ನಾಡಪ್ರಭು ಕೆಂಪೇಗೌಡ್ರು ಸೇನೆಯ ವತಿಯಿಂದ ಎಲ್ ಕೆ ಜಿ ಮತ್ತು ಯು ಕೆ ಜಿ ಶಾಲಾ ಮಕ್ಕಳಿಗೆ ಅಕ್ಕಿ ದಿನಸಿ ಪದಾರ್ಥಗಳು ಹಾಗೂ ತರಕಾರಿಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಿಶ್ವನಾಥ್, ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ನಾಡಪ್ರಭು ಕೆಂಪೇಗೌಡ್ರು ಸೇನೆಯ ರಾಜ್ಯಾಧ್ಯಕ್ಷರು ಮಹೇಶ್ ಕತ್ತರಿಘಟ್ಟ, ರಾಜ್ಯ ಉಪಾಧ್ಯಕ್ಷರಾದ ಎಂ ಎನ್ ಗಣೇಶ, ಗೌರವಾಧ್ಯಕ್ಷರಾದ ಅಂಕೇನಹಳ್ಳಿ ವಾಸು, ನೇಗಿಲಯೋಗಿ ಸಂಘದ ಅಧ್ಯಕ್ಷರಾದ ಸತೀಶ್ ಗೌಡಗೆರೆ ಸತೀಶ್, ವಳಂಬಿಗೆ ಗ್ರಾಮದ ನಾರಾಯಣಗೌಡ, ಹಾಗೂ ಶಾಲಾ ಮಕ್ಕಳು ಸೇರಿದಂತೆ ಇತರರು ಹಾಜರಿದ್ದರು.
