ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರು ಬ್ಯಾನರ್ನಲ್ಲೂ ಸಹ ರಾಜಕೀಯ ಮಾಡುತ್ತಿದ್ದರೆ ಎಂದು ಅಣತಿ ಆನಂದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಾಸಕ ಸಿ. ಎನ್. ಬಾಲಕೃಷ್ಣರವರ ಸರ್ವಾಧಿಕಾರಿ ಧೋರಣೆಯಿಂದ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದ ಹಿನ್ನೆಲೆಯಲ್ಲಿ ನಮ್ಮ ಜೊತೆ ನೂರಾರು ಹೆಚ್ಚು ಜನ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಹಲವಾರು ಮಂದಿ ಮುಖಂಡರು ಜೆಡಿಎಸ್ ಹಾಗೂ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದೇವೆ ಎಂದರು.
ಮೇ 29 ರಂದು ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಎ. ಈ. ಚಂದ್ರಶೇಖರ್, ಹೇಮಾವತಿ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಎಚ್. ಎಸ್. ಶ್ರೀಕಂಠಪ್ಪ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶ್ವೇತಾಆನಂದ್, ಮಾಜಿ ಪುರಸಭಾ ಅಧ್ಯಕ್ಷರಾದ ಶ್ರೀಮತಿ ಗೀತಾ ಅವಿನಾಶ್, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಣತಿ ಆನಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದೇವರಾಜು, ಶ್ರವಬೆಳಗೊಳ ಸೊಸೈಟಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಪ್ರದೀಪ್, ಅಣತಿ ಗ್ರಾಮಪಂಚಾಯಿತಿ ಸದಸ್ಯರುಗಳಾದ ಕಮಲಕುಮಾರ್, ಅನಿತಾ ದಿನೇಶ್, ಜೆಡಿಎಸ್ ಪಕ್ಷದ ಮುಖಂಡರುಗಳಾದ ಬೆಕ್ಕ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯ ಲವಣ್ಣ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷೆ ಪರಾಹ್ನ ಅನ್ನು, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಜಬೀಉಲ್ಲಾ ಬೇಗ್,ಅನ್ನು ಸೇರಿದಂತೆ ಅನೇಕ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಒಪ್ಪಿಗೆ ಮೇರೆಗೆ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇವೆ ಎಂದರು.ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡಲು ಹೋರಾಟ ನಡೆಸುತ್ತೇವೆ. ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಣತಿ ಆನಂದ್ ಕುಮಾರ್, ಎಂ ಕೆ ಮಂಜೇಗೌಡ, ಲವಣ್ಣ, ಜಬೀಉಲ್ಲಾಬೇಗ್, ಸೇರಿದಂತೆ ಇತರರು ಹಾಜರಿದ್ದರು.
– ಮಂಜುನಾಥ್ ಐ.ಕೆ
