ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋನ್ನನಕೊಪ್ಪಲು ಗ್ರಾಮದ ರಂಗಸ್ವಾಮಿ, ಹರೀಶ್, ದಯಾನಂದ್, ರವೀಶ್, ಕಿರಣ್, ಜಗ, ಅರುಣ್, ಲೋಹಿತ್, ಮನೋಜ್, ಆನಂದ್, ತಮ್ಮಯ್ಯ ಹಾಗೂ ಇತರರು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಿ.ಆರ್. ಚಿದಾನಂದ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
