ಚನ್ನರಾಯಪಟ್ಟಣ: ನಗರ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೇಘಲಕೇರಿ ಮೋಹನ್ ಕುಮಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಎನ್ ಬಾಲಕೃಷ್ಣರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಶಾಸಕರಾದ ಸಿಎನ್ ಬಾಲಕೃಷ್ಣ, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷರಾದ ಮೆಡಿಕಲ್ ವೆಂಕಟೇಶ್, ಟಿ ಎ ಪಿ ಸಿ ಎಂ ಎಸ್ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಮರಗೂರು ಅನಿಲ್, ಪುರಸಭಾ ಮಾಜಿ ಉಪಾಧ್ಯಕ್ಷರಾದ ಗಾರೆ ಕೃಷ್ಣ, ಮಾಜಿ ಪುರಸಭಾ ಸದಸ್ಯರಾದ ರವೀಶ್, ಜೆಡಿಎಸ್ ಮುಖಂಡರಾದ ರವೀಂದ್ರ, ಸೇರಿದಂತೆ ಇತರರು ಹಾಜರಿದ್ದರು.

