ಚನ್ನರಾಯಪಟ್ಟಣ: ತುಮಕೂರು ಜಿಲ್ಲೆಯ ಶಿರಾ ತಾಲೂಕು ಕೇಂದ್ರದಲ್ಲಿ ನಡೆದ ಐಸಿಎಸ್ಸಿ ಪಠ್ಯಕ್ರಮದ ರೀಜನಲ್ ಕರಾಟೆ ಪಂದ್ಯಾವಳಿಯಲ್ಲಿ ಚನ್ನರಾಯಪಟ್ಟಣದ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಮೋಹನ್ ಕುಮಾರ್ ಪ್ರಥಮ ಸ್ಥಾನ ಪಡೆದು, ರಾಷ್ಟ್ರಮಟ್ಟದ ಐಸಿಎಸ್ಸಿ ಸ್ಕೂಲ್ ಗೇಮ್ಸ್ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಮೋಹನ್ ಕುಮಾರ್ ಅವರು ಶಾಲೆಯ ಮುಖ್ಯ ತರಬೇತುದಾರರಾದ ರೆನ್ಸಿ ನಟರಾಜ್ ಎಚ್.ಜಿ. ಹಾಗೂ ತರಬೇತುದಾರರಾದ ಸೆನ್ಸಯ್ ಮಾಲತೇಶ್ ಅವರ ಮಾರ್ಗದರ್ಶನದಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿ ಶ್ರೀಮತಿ ಗೀತಾ, ಪ್ರಾಂಶುಪಾಲರಾದ ಈ. ಮಹದೇವ್ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
– ಮಂಜುನಾಥ್ ಐ.ಕೆ
