ಚನ್ನರಾಯಪಟ್ಟಣ, ಆ.5: ಭಾರತೀಯ ಜನತಾ ಪಾರ್ಟಿಯ ಶ್ರವಣಬೆಳಗೊಳ ಮಂಡಲದ ವತಿಯಿಂದ ಮಾಸಿಕ ಸಭೆ ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತ ಸಭೆಯನ್ನು ಮಂಡಲ ಅಧ್ಯಕ್ಷ ಪರಮ ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಕುರಿತು ಚರ್ಚೆ ನಡೆಸಿ, ಬೂತ್ ಮಟ್ಟದ ಕಾರ್ಯಕರ್ತರಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. ಪಕ್ಷ ಸಂಘಟನೆ ಬಲಪಡಿಸುವುದು ಹಾಗೂ ಮುಂಬರುವ ಕಾರ್ಯಕ್ರಮಗಳ ಕುರಿತು ಸಹ ಸಮಾಲೋಚನೆ ನಡೆಯಿತು.

ಈ ಸಂದರ್ಭದಲ್ಲಿ ಹಲವು ಮಹಿಳೆಯರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ಮುಖಂಡರು ನೂತನ ಸದಸ್ಯರನ್ನು ಸ್ವಾಗತಿಸಿ, ಪಕ್ಷದ ತತ್ವ-ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವಂತೆ ಕರೆ ನೀಡಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ್, ಜಿಲ್ಲಾ ಉಪಾಧ್ಯಕ್ಷ ಹಾಗೂ ಶ್ರವಣಬೆಳಗೊಳ ಮಂಡಲ ಉಸ್ತುವಾರಿ ಗಂಗಾಧರ್, ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲ ಪ್ರಭಾರಿ ನವಿಲೇ ಅಣ್ಣಪ್ಪ, ಮಂಡಲ SIR ಉಸ್ತುವಾರಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ರುಕೇಶ್, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಸಿ.ಆರ್. ಚಿದಾನಂದ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗನ್ನಿ ವಿಶ್ವನಾಥ್ ಸಿ.ಆರ್. ಹಾಗೂ ಮುಳ್ಕೆರೆ ಪ್ರಶಾಂತ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಶಕ್ತಿ ಕೇಂದ್ರಗಳ ಅಧ್ಯಕ್ಷರು, BLA-2 ಪದಾಧಿಕಾರಿಗಳು, ಮಹಿಳಾ ಮೋರ್ಚಾ ಕಾರ್ಯಕರ್ತರು ಹಾಗೂ ಹಿರಿಯ-ಕಿರಿಯ ಮುಖಂಡರು ಭಾಗವಹಿಸಿದ್ದರು.
– ಮಂಜುನಾಥ ಐ.ಕೆ.
