ಚನ್ನರಾಯಪಟ್ಟಣ: ಶಾಸಕರ ನಿವಾಸಕ್ಕೆ ಆಗಮಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಚನ್ನರಾಯಪಟ್ಟಣ ತಾಲೂಕು ಜೆಡಿಎಸ್ ಯುವಕರಾದ ಜೈದೀಪ ಅವರು ಸ್ವಾಗತಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಎನ್ ಬಾಲಕೃಷ್ಣ, ಮಾಜಿ ತಾಲೂಕು ಪಂಚಾಯತಿ ಸದಸ್ಯರಾದಕೆ ಪುಟ್ಟಸ್ವಾಮಿ, ಜೆಡಿಎಸ್ ಯುವ ಮುಖಂಡರಾದ ಜೈದೀಪ್ ಬಾಲಕೃಷ್ಣ, ಮರುವನಹಳ್ಳಿ ದೇವರಾಜ್, ಭುವನಹಳ್ಳಿ ಯೋಗೇಶ್, ವಡೆ ರಘು, ಸೇರಿದಂತೆ ಇತರರು ಹಾಜರಿದ್ದರು.
ವರದಿ : ಐ ಕೆ ಮಂಜುನಾಥ್
