ಚನ್ನರಾಯಪಟ್ಟಣ, ಜು.17: 2026ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾಚರಣೆಯನ್ನು ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಶೇ.100ರಷ್ಟು ಪೂರ್ಣಗೊಳಿಸಿದ ಅಗ್ರಹಾರ ಗ್ರಾಮದ ಮತಗಟ್ಟೆ ಸಂಖ್ಯೆ–46ರ ಮತಗಟ್ಟೆ ಅಧಿಕಾರಿ ಶ್ರೀಮತಿ ಉಮಾದೇವಿ ಅವರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಜೆ.ಎಸ್. ಶಂಕರಪ್ಪ ಅವರು ಉಮಾದೇವಿ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ಚುನಾವಣಾ ಕಾರ್ಯವನ್ನು ಸಮಯಕ್ಕೆ ಸರಿಯಾಗಿ ಹಾಗೂ ಸಮರ್ಪಕವಾಗಿ ಪೂರ್ಣಗೊಳಿಸಿರುವುದನ್ನು ಅವರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ಗಿರೀಶ್ ಕುಮಾರ್, ಶಿರಸ್ತೇದಾರ್ ಅನಿಲ್ ಕುಮಾರ್, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಜಯಲಕ್ಷ್ಮಿ, ಕಸಬಾ ಹೋಬಳಿಯ ಗ್ರಾಮ ಆಡಳಿತಾಧಿಕಾರಿ ಮುತ್ತುರಾಜ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ
