ಚನ್ನರಾಯಪಟ್ಟಣ: ರಾಜ್ಯದಲ್ಲಿ 300 ಶಾಖೆಗಳನ್ನು ಹೊಂದಿರುವ ಅವಿಷ್ಕಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯು ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭ ಮಾಡಿದೆ ಎಂದು ಸಂಸ್ಥೆಯ ಸಿ. ಇ. ಓ ನಾಗವೇಣಿ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗುಣಮಟ್ಟದ ಮೌಲ್ಯಯುತ ಶಿಕ್ಷಣ ನೀಡಿಕೆ ನಮ್ಮ ಸಂಸ್ಥೆಯಿಂದ ನಡೆಯುತ್ತಿದ್ದು, ರೂ. 30,000 ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ, ಸಂಸ್ಕಾರ, ಸಂಸ್ಕೃತಿ, ಮೌಲ್ಯಗಳನ್ನ ತುಂಬುವ ಕಾರ್ಯ, ಸಮಾಜಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಕಾರ್ಯ ನಮ್ಮದಾಗಿದೆ ಎಂದರು.
ಸಂಸ್ಥೆಯ ನಿರ್ದೇಶಕಿ ಶಾಲಿನಿ ಮಾತನಾಡಿ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸಿ ಮಕ್ಕಳ ದೈಹಿಕ ಮಾನಸಿಕ, ಸಬಲತೆಗೆ ವಿಶೇಷ ಶಿಕ್ಷಣ ನೀಡಿಕೆ ನಮ್ಮ ಹೆಗ್ಗಳಿಕೆ ಎಂದರು.ಅವಿಷ್ಕಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯ
ಮುಖ್ಯಸ್ಥ ಸೌರಭ ಹಾಜರಿದ್ದರು.
- ಮಂಜುನಾಥ್ ಐ ಕೆ.
